ತರೀಕೆರೆಮಕ್ಕಳ ಭವಿಷ್ಯ ಬಹಳ ಮುಖ್ಯವಾದುದು ಈ ನಿಟ್ಟಿನಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಕೆಲಸ ನಿರ್ವಹಿಸಬೇಕು ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದರು.
ತರೀಕೆರೆಯಲ್ಲಿ 9ನೇ ರಾಷ್ಟ್ರೀಯ ಪೋಷಣ್ ಮಾಸಾಚರಣೆ
ಕನ್ನಡಪ್ರಭ ವಾರ್ತೆ ತರೀಕೆರೆಮಕ್ಕಳ ಭವಿಷ್ಯ ಬಹಳ ಮುಖ್ಯವಾದುದು ಈ ನಿಟ್ಟಿನಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಕೆಲಸ ನಿರ್ವಹಿಸಬೇಕು ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದರು.
ಮಂಗಳವಾರ ತಾಲೂಕು ಆಡಳಿತ, ತಾಪಂ, ಪುರಸಭೆ, ತರೀಕೆರೆ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘದ ಸಂಯುಕ್ತ ಆಶ್ರಯದಲ್ಲಿ ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ 9ನೇ ರಾಷ್ಟ್ರೀಯ ಪೋಷಣ್ ಮಾಸಾ ಚರಣೆ ಮತ್ತು ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರಿಗೆ ನೇಮಕಾತಿ ಆದೇಶ ವಿತರಣಾ ಸಮಾರಂಭ ಉದ್ಘಾಟಿಸಿ ಮಾತನಾಡಿದರು.ಅಂಗನನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು, ಮಹಿಳಾ ಸಹಾಯ ವಾಣಿ ಮೂಲಕ ಗರ್ಬಿಣಿಯರು, ಬಾಣಂತಿಯರಿಗೆ ಸಹಾಯ ಮಾಡಬೇಕು, ಗರ್ಭಿಣಿಯರು, ತಾಯಂದಿರು ಮತ್ತು ಮಕ್ಕಳಿಗೆ ಹೆಚ್ಚು ಪೌಷ್ಠಿಕಾಂಶವುಳ್ಳ ಆಹಾರ ಕೊಡಬೇಕು ಎಂದು ಸರ್ಕಾರ ಆದೇಶ ನೀಡಿದೆ. ತಾಯಿ ಮತ್ತು ಮಕ್ಕಳು ಅಪೌಷ್ಠಿಕತೆ ದೂರಮಾಡಲು ಹೆಚ್ಚು ಪೌಷ್ಠಿಕಾಂಶ ಆಹಾರ ಸೇವಿಸಬೇಕು, ಹದಿ ಹರೆಯದವರಿಗೂ ಪೌಷ್ಠಿಕಾಂಶದ ಆಹಾರ ಅಗತ್ಯ ಎಂದರು.
ಶಿಶು ಅಭಿವೃದ್ಧಿ ಯೋಜನಾಧಿಕಾರಿ ಚರಣ್ ಕುಮಾರ್ ಮಾತನಾಡಿ ಮಹಿಳೆಯರು, ತಾಯಂದಿರು, ಮಕ್ಕಳು, ಹದಿಹರೆಯ ದವರು ಹೆಚ್ಚು ಪೌಷ್ಠಿಕಾಂಶ ಉಳ್ಳ ಆಹಾರ ಸೇವಿಸಬೇಕು. ಈ ಬಗ್ಗೆ ಸಮುದಾಯದ ಸಹಬಾಗಿತ್ವ ಅಗತ್ಯ. ಮಕ್ಕಳನ್ನು ಹೆಚ್ಚು ಆರೋಗ್ಯಕರವಾಗಿ ಬೆಳೆಸಬೇಕು. ತಂತ್ರಜ್ಞಾನದ ಬಳಕೆ ಆಗಬೇಕು. ಮೊದಲ ಸಾವಿರ ದಿನಗಳಲ್ಲಿ ಮಕ್ಕಳನ್ನು ಚೆನ್ನಾಗಿ ನೋಡಿಕೊಳ್ಳಬೇಕು ಎಂದು ಹೇಳಿದರು.ತಾಲೂಕು ಆರೋಗ್ಯಾಧಿಕಾರಿ ಡಾ.ಬಿ.ಜಿ.ಚಂದ್ರಶೇಖರ್ , ವಕೀಲ ಬಿ.ಪಿ.ವಿಕಾಸ್, ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷೆ ಹೇಮಲತಾ ರೇವಣ್ಣ, ತಹಸೀಲ್ದಾರ್ ರಶ್ಮಿ ಎಚ್.ಜಿ. ಉಪ ನಿರ್ದೇಶಕ ಬಿ.ಎಚ್.ಕೃಷ್ಣಪ್ಪ, ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ರೋಹಿತ್, ಬಿ.ಸಿ.ಎಂ.ವಿಸ್ತರಣಾಧಿಕಾರಿ ಅಶೋಕ್ ರಾಜ್ ಅರಸ್ ಮಾತನಾಡಿದರು.
ಹಿರಿಯ ನಾಗರೀಕರು, ಕನ್ನಡಶ್ರೀ ಭಗವಾನ್, ಕ್ರಿಸ್ತದಯಾ ಕುಮಾರ್, ತಾ.ಪಂ.ಇ.ಒ.ಡಾ.ಆರ್.ದೇವೇಂದ್ರಪ್ಪ, ಬೆಟ್ಟದಹಳ್ಳಿ ವಲಯ ಅಂಗನವಾಡಿ ಕಾರ್ಯಕರ್ತೆಯರು, ಮೇಲ್ವಿಚಾರಕರು ಆಶಾ ಕಾರ್ಯಕರ್ತೆಯರು, ಪ್ರಾಥಮಿಕ ಆರೋಗ್ಯ ಸುರಕ್ಷಾ ಅಧಿಕಾರಿಗಳು ಭಾಗವಹಿಸಿದ್ದರು.ನೂತನವಾಗಿ ಆಯ್ಕೆಯಾದ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ನೇಮಕಾತಿ ಆದೇಶ ಪತ್ರ ವಿತರಿಸಲಾಯಿತು. ಸೀಮಂತ ಕಾರ್ಯಕ್ರಮ ಮತ್ತು ಆರು ತಿಂಗಳು ತುಂಬಿದ ಮಕ್ಕಳಿಗೆ ಅನ್ನಪ್ರಾಶನ ಕಾರ್ಯಕ್ರಮ ನಡೆಯಿತು.
6ಕೆಟಿಆರ್.ಕೆ.1ಃ ತರೀಕೆರೆಯಲ್ಲಿ ನಡೆದ 9ನೇ ರಾಷ್ಟ್ರೀಯ ಪೋಷಣ್ ಮಾಸಾಚರಣೆಯನ್ನು ಶಾಸಕ ಜಿ.ಎಚ್.ಶ್ರೀನಿವಾಸ್ ಉದ್ಘಾಟಿಸಿದರು. ತಹಸೀಲ್ದಾರ್ ರಶ್ಮಿ ಎಚ್.ಜಿ.ತಾ.ಪಂ.ಇ.ಒ.ಡಾ.ದೇವೇಂದ್ರಪ್ಪ ಅರ್. ತಾ.ಆರೋಗ್ಯಾಧಿಕಾರಿ ಡಾ.ಬಿ.ಜಿ. ಚಂದ್ರಶೇಖರ್, ಸಿಡಿಪಿ.ಒ.ಚರಣ್ ಕುಮಾರ್ ಮತ್ತಿತರರು ಇದ್ದರು.