ಸಾರಾಂಶ
ಮಕ್ಕಳ ಹಕ್ಕುಗಳಿಗೆ ಒತ್ತು ನೀಡಿ ಅವುಗಳನ್ನು ಕಕ್ಷಿಸುವುದು ನಮ್ಮ ಕರ್ತವ್ಯ ಹಾಗಾಗಿ ಅವರ ಹಕ್ಕುಗಳಿಗೆ ಚ್ಯುತಿ ಬಾರದಂತೆ ಕ್ರಮವಹಿಸಬೇಕು ಎಂದು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯೆ ಮಂಜು ಅಭಿಪ್ರಾಯ ಪಟ್ಟಿದ್ದಾರೆ
- ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಪಾಲನೆ ಪೋಷಣೆ, ಬಾಲ್ಯವಿವಾಹ ವಿವಿಧ ಕಾಯ್ದೆ ಕುರಿತ ತರಬೇತಿ ಕಾರ್ಯಾಗಾರಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು
ಮಕ್ಕಳ ಹಕ್ಕುಗಳನ್ನು ಎತ್ತಿ ಹಿಡಿಯುವ ಕೆಲಸವನ್ನು ಪ್ರತಿಯೊಬ್ಬ ನಾಗರಿಕರೂ ಮಾಡಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯೆ ಮಂಜು ಹೇಳಿದರು.ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಮಕ್ಕಳ ಪಾಲನೆ ಪೋಷಣೆ ಬಾಲ್ಯ ವಿವಾಹ ಕಾಯ್ದೆ ಪೋಕ್ಸೋ ಕಾಯ್ದೆ ಕುರಿತ ಒಂದು ದಿನದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು. ಮಕ್ಕಳ ಹಕ್ಕುಗಳನ್ನು ಎತ್ತಿ ಹಿಡಿಯುವುದು, ಅವುಗಳನ್ನು ಕಾಪಾಡುವುದು ನಮ್ಮೆಲ್ಲರ ಕರ್ತವ್ಯ ಮತ್ತು ಜವಾಬ್ದಾರಿ. ಹಾಗಾಗಿ ನಾವು ಅವುಗಳ ಉಲ್ಲಂಘನೆ ಯಾಗದಂತೆ ನೋಡಿಕೊಳ್ಳಬೇಕು ಎಂದು ಕಿವಿ ಮಾತು ಹೇಳಿದರು.
ಇತ್ತೀಚಿನ ದಿನಗಳಲ್ಲಿ ಎಲ್ಲೆಡೆ ಮಕ್ಕಳ ಹಕ್ಕುಗಳ ಉಲ್ಲಂಘನೆ ಆಗುತ್ತಿದೆ. ಅವುಗಳನ್ನು ನಾವು ತಡೆಗಟ್ಟಬೇಕಾದರೆ ಮಕ್ಕಳ ರಕ್ಷಣೆಗಿರುವ ಕಾನೂನು ಮತ್ತು ಕಾಯ್ದೆ ಅರಿಯಬೇಕು ಎಂದು ಸಲಹೆ ನೀಡಿದರು.ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಈ ಕಾರ್ಯಾಗಾರದಲ್ಲಿ ಪಾಲ್ಗೊಂಡು ತರಬೇತಿ ಪಡೆಯಬೇಕು. ಜಿಲ್ಲೆಯಲ್ಲಿ ನಡೆಯುತ್ತಿರುವ ಮಕ್ಕಳ ಹಕ್ಕುಗಳ ಉಲ್ಲಂಘನೆ ಮಕ್ಕಳ ಮೇಲಿನ ದೌರ್ಜನ್ಯ ಮತ್ತು ಶೋಷಣೆ ತಡೆಗಟ್ಟಬೇಕು ಎಂದು ಮನವಿ ಮಾಡಿದರು.
ಕಾರ್ಯಾಗಾರದಲ್ಲಿ ಮಕ್ಕಳ ಹಕ್ಕುಗಳ ಸಮಿತಿ ಸದಸ್ಯ ನಟರಾಜ್, ಜಿಪಂನ ಮುಖ್ಯ ಯೋಜನಾಧಿಕಾರಿ ಕರೇಗೌಡ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಸೋಮಶೇಖರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ರಾಜಾನಾಯ್ಕ ಉಪಸ್ಥಿತರಿದ್ದರು.22 ಕೆಸಿಕೆಎಂ 2ಚಿಕ್ಕಮಗಳೂರು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಒಂದು ದಿನದ ತರಬೇತಿ ಕಾರ್ಯಾಗಾರವನ್ನು ಮಂಜು ಉದ್ಘಾಟಿಸಿದರು.