ಸಾರಾಂಶ
ಸಂವಿಧಾನದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅವಕಾಶಗಳು ಮತ್ತು ಮಕ್ಕಳಿಗಿರುವ ಸೌಲಭ್ಯಗಳನ್ನು ನಾವೆಲ್ಲರೂ ಒದಗಿಸಿ ಕೊಡಬೇಕು.
ಕನ್ನಡಪ್ರಭ ವಾರ್ತೆ ಮೈಸೂರು
ಪ್ರಸ್ತುತ ಮಕ್ಕಳಿಗೆ ಅಂಗೈ ಜಗತ್ತಿನಲ್ಲಿ ಶಿಕ್ಷಣ ಸಿಗುತ್ತಿದೆ. ಇದು ಪರಿಸರ ಸಹಜ ಶಿಕ್ಷಣಕ್ಕೆ ಮರಳಬೇಕಿದೆ ಎಂದು ರಂಗಾಯಣ ನಿರ್ದೇಶಕ ಸತೀಶ್ ತಿಪಟೂರು ತಿಳಿಸಿದರು.ನಗರದ ರಂಗಾಯಣದ ಕಾರಂತ ರಂಗ ಚಾವಡಿಯಲ್ಲಿ ಗ್ರಾಮೀಣ ಶಿಕ್ಷಣ ಮತ್ತು ಆರೋಗ್ಯ ಸಂಸ್ಥೆ (ಆರ್.ಎಲ್.ಎಚ್.ಪಿ), ಯುನೆಸೆಫ್, ಕರ್ನಾಟಕ ಮಕ್ಕಳ ಹಕ್ಕುಗಳ ನಿಗಾ ಕೇಂದ್ರ ಸಂಯುಕ್ತವಾಗಿ ಗುರುವಾರ ಆಯೋಜಿಸಿದ್ದ ಮಕ್ಕಳ ಹಕ್ಕುಗಳ ಸಂಸತ್ 24- ಜಿಲ್ಲಾ ಮಟ್ಟದ ಮಕ್ಕಳ ಸಮಾಲೋಚನೆಯನ್ನು ಅವರು ಉದ್ಘಾಟಿಸಿ ಮಾತನಾಡಿದರು.
ಸಂವಿಧಾನದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅವಕಾಶಗಳು ಮತ್ತು ಮಕ್ಕಳಿಗಿರುವ ಸೌಲಭ್ಯಗಳನ್ನು ನಾವೆಲ್ಲರೂ ಒದಗಿಸಿ ಕೊಡಬೇಕು. ಮಕ್ಕಳ ಪ್ರಸ್ತುತ ಸ್ಥಿತಿಯಲ್ಲಿ ಅವರ ವಿಕಾಸ ಹೇಗೆ ಎಂದು ನೋಡಲು ಇದು ಸರಿಯಾದ ಕಾಲ ಎಂದು ಅನಿಸುತ್ತದೆ. ಭಾಗವಹಿಸುವಿಕೆಯು ವಿಕಾಸದ ಭಾಗವಾಗಬೇಕು ಎಂದು ಅವರು ಹೇಳಿದರು.ವಿಶ್ರಾಂತ ಕುಲಪತಿ ಪ್ರೊ. ಸಬೀಹ ಭೂಮಿಗೌಡ, ಗ್ರಾಮೀಣ ಶಿಕ್ಷಣ ಮತ್ತು ಆರೋಗ್ಯ ಸಂಸ್ಥೆಯ ನಿರ್ದೇಶಕಿ ಸರಸ್ವತಿ, ಮಕ್ಕಳ ಕಲ್ಯಾಣ ಸಮಿತಿ ಸದಸ್ಯ ಧನಂಜಯ ಎಲಿಯೂರು, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಯೋಗೇಶ್, ಸಹಾಯಕ ಮಕ್ಕಳ ಕಲ್ಯಾಣ ಪೊಲೀಸ್ ಅಧಿಕಾರಿ ಪ್ರಸನ್ನ ಕುಮಾರ್, ಪ್ರೊ. ಭೂಮಿಗೌಡ, ಮಕ್ಕಳ ಪ್ರತಿನಿಧಿಗಳಾದ ಹೇಮಾ, ರಿತೇಶ್, ವಿವಿಧ ತಾಲೂಕುಗಳಿಂದ 35 ಮಕ್ಕಳು, 15 ಶಿಕ್ಷಕರು, ಪೋಷಕರು ಇದ್ದರು.
;Resize=(128,128))
;Resize=(128,128))
;Resize=(128,128))