ಸುತ್ತಮುತ್ತಲ ದೈನಂದಿನ ಬದುಕಿಗೆ ಬೇಕಿರುವ ಅಗತ್ಯ ವಸ್ತುಗಳ ಖರೀದಿಸುವ ಜ್ಞಾನ ಬೇಕಿದೆ. ಮಕ್ಕಳ ಸಂತೆ ಮಕ್ಕಳಿಗೆ, ಪೋಷಕರಿಗೆ ಖುಷಿ ಕೊಡುವ ಜೊತೆಗೆ ಹಣಕಾಸಿನ ವ್ಯವಹಾರವನ್ನು ಬಾಲ್ಯದಲ್ಲಿಯೇ ಮಕ್ಕಳಿಗೆ ಕಲಿಸಲು ಶಿಕ್ಷಕರು ಮುಂದಾಗಿರುವುದು ಸಂತಸ ತಂದಿದೆ.
ಕನ್ನಡಪ್ರಭ ವಾರ್ತೆ ಕಿಕ್ಕೇರಿ
ಮಕ್ಕಳ ವ್ಯವಹಾರಿಕ ಜ್ಞಾನ ವೃದ್ಧಿಸಲು ಮಕ್ಕಳ ಸಂತೆ ಉಪಯುಕ್ತವಾಗಿದೆ ಎಂದು ರೈತಸಂಘದ ತಾಲೂಕು ಅಧ್ಯಕ್ಷ ಕಾರಿಗಾನಹಳ್ಳಿ ಪುಟ್ಟೇಗೌಡ ಹೇಳಿದರು.ಕಾರಿಗಾನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈಚೆಗೆ ಏರ್ಪಡಿಸಿದ್ದ ಮಕ್ಕಳ ಸಂತೆಯಲ್ಲಿ ಮಾತನಾಡಿ, ಮಕ್ಕಳು ಕೇವಲ ಅಂಕಗಳಿಸಿದರೆ ಸಾಲದು ಬಾಲ್ಯದಿಂದಲೇ ಬದುಕಿನ ಕಲೆಗಾಗಿ ಕನಿಷ್ಠ ವ್ಯವಹಾರ ಜ್ಞಾನವನ್ನಾದರೂ ಕಲಿಯಬೇಕು ಎಂದರು.
ಸುತ್ತಮುತ್ತಲ ದೈನಂದಿನ ಬದುಕಿಗೆ ಬೇಕಿರುವ ಅಗತ್ಯ ವಸ್ತುಗಳ ಖರೀದಿಸುವ ಜ್ಞಾನ ಬೇಕಿದೆ. ಮಕ್ಕಳ ಸಂತೆ ಮಕ್ಕಳಿಗೆ, ಪೋಷಕರಿಗೆ ಖುಷಿ ಕೊಡುವ ಜೊತೆಗೆ ಹಣಕಾಸಿನ ವ್ಯವಹಾರವನ್ನು ಬಾಲ್ಯದಲ್ಲಿಯೇ ಮಕ್ಕಳಿಗೆ ಕಲಿಸಲು ಶಿಕ್ಷಕರು ಮುಂದಾಗಿರುವುದು ಸಂತಸ ತಂದಿದೆ ಎಂದರು.ಮಕ್ಕಳು ತಂದು ಅಂಗಡಿಗಳಂತೆ ಜೋಡಿಸಿಟ್ಟಿದ್ದ ವಸ್ತುಗಳನ್ನು ಪೋಷಕರು ಖುಷಿಯಿಂದ ಚೌಕಾಸಿ ಮಾಡುತ್ತಾ ರೇಗಿಸುತ್ತ ಖುಷಿಯಿಂದ ಖರೀದಿಸಿದರು. ಮಕ್ಕಳು ಜೋರಾಗಿ ಕೂಗುತ್ತಾ ಒಂದು ತೆಗೆದುಕೊಂಡರೆ ಮತ್ತೊಂದು ಫ್ರೀ ಎಂದು ಗ್ರಾಹಕರನ್ನು ಕರೆಯುತ್ತಿದ್ದರು. ಚುರುಮುರಿ, ಸೌತೆಕಾಯಿ, ಕಲ್ಲಂಗಡಿ, ತರಕಾರಿ, ಜ್ಯೂಸ್, ಬಜ್ಜಿ, ಬೋಂಡಾದಂತಹ ವಿವಿಧ ವಸ್ತುಗಳನ್ನು ತಂದು ಖುಷಿಯಿಂದ ವ್ಯಾಪಾರ ಮಾಡಿದರು. ನಿಖರವಾಗಿ ತಕ್ಕಡಿಯಿಂದ ತೂಗಿ ವಸ್ತುಗಳನ್ನು ಬಟ್ಟೆಬ್ಯಾಗ್‌ನಲ್ಲಿ ತುಂಬಿ ಕೊಟ್ಟು ಪರಿಸರ ಪ್ರೇಮ ಮೆರೆದರು. ಶಿಕ್ಷಕರಾದ ಜಿ.ಕೆ.ಸ್ವಾಮಿ, ಜಯಕುಮಾರ್, ಸಿ.ದೇವರಾಜು, ಎಸ್‌ಡಿಎಂಸಿ ಸದಸ್ಯರು, ಪೋಷಕರು ಇದ್ದರು.
ಇಂದು ನ್ಯಾಯಾಧೀಶೆ ಎನ್.ದೀಪಿಕಾಗೆ ಸನ್ಮಾನಕನ್ನಡಪ್ರಭ ವಾರ್ತೆ ಮಂಡ್ಯ
ನಗರದ ಗುಡ್‌ಷಫರ್ಡ್ ಶಿಕ್ಷಣ ಟ್ರಸ್ಟ್ ವತಿಯಿಂದ ಫೆ.27ರ ಬೆಳಗ್ಗೆ 11.30ಕ್ಕೆ ಶಾಲಾ ಆವರಣದಲ್ಲಿ ಗ್ರಾಮೀಣ ಪ್ರತಿಭೆಯ ನ್ಯಾಯಾಧೀಶೆ ಎನ್.ದೀಪಿಕಾ ಅವರಿಗೆ ಸನ್ಮಾನ ಸಮಾರಂಭ ನಡೆಯಲಿದೆ. ಸಾಡೆ ದೇವಾಲಯದ ಸಭಾ ಪಾಲಕ ರೇ. ಅ್ಯಂಡ್ರೂಜಾನ್ ಅವರ ದಿವ್ಯಸಾನ್ನಿಧ್ಯದಲ್ಲಿ ನಡೆಯುವ ಸಮಾರಂಭವನ್ನು ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ಆನಂದ ಅವರು ಉದ್ಘಾಟಿಸುವರು. ಶಿಕ್ಷಣ ಟ್ರಸ್ಟ್ ಅಧ್ಯಕ್ಷ ಎ.ಜಾರ್ಜ್ ಮೋಹನ್ ಕುಮಾರ್ ಅಧ್ಯಕ್ಷತೆ ವಹಿಸುವರು. ಶಿಕ್ಷಣ ಟ್ರಸ್ಟ್ ಕಾರ್ಯದರ್ಶಿ ಎ. ಮೋರಿಸ್ ಜೈಕುಮಾರಿ ಅವರು ಸಿವಿಲ್ ನ್ಯಾಯಧೀಶೆ ಎನ್. ದೀಪಿಕಾ ಅವರನ್ನು ಸನ್ಮಾನಿಸಿ ಗೌರವಿಸುವರು. ವಕೀಲ ಕೆ.ಎಂ.ಅನಿಲ್‌ಕುಮಾರ್, ಸಮಾಜ ಸೇವಕ ಎಂ.ಕೆ.ಮಹೇಶ್, ಜಾಹ್ನವಿ ಅವರು ಸಮಾರಂಭದಲ್ಲಿ ಭಾಗವಹಿಸುವರು ಎಂದು ಶಿಕ್ಷಣ ಟ್ರಸ್ಟ್ ಸಂಸ್ಥಾಪಕ ವೈ. ಥಾಮಸ್ ಬೆಂಜಮಿನ್ ತಿಳಿಸಿದ್ದಾರೆ.