ಮಕ್ಕಳು ದೇಶದ ಆಸ್ತಿ ಹೀಗಾಗಿ ಸರ್ಕಾರಿ ಶಾಲೆಗಳ ಸುಧಾರಣೆಗೆ ಸರ್ವ ರೀತಿಯಲ್ಲಿಯೂ ಕಾರ್ಯಕ್ರಮವನ್ನು ಜನಪ್ರತಿನಿಧಿ ಅಧಿಕಾರಿಗಳು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು.
ಆನ್‌ಲೈನ್ ಮೂಲಕ ಚಾಲನೆ ನೀಡಿ ಸಚಿವ ಪ್ರಿಯಾಂಕ್ ಖರ್ಗೆ ಶ್ಲಾಘನೆ । ಸಮಸ್ಯೆಗಳನ್ನು ಬಗೆಹರಿಸುವ ಭರವಸೆ
ಕನ್ನಡಪ್ರಭ ವಾರ್ತೆ ಹನೂರುಮಕ್ಕಳ ವಿಶೇಷ ಗ್ರಾಮಸಭೆ ರಾಜ್ಯಕ್ಕೆ ಅಲ್ಲ ದೇಶಕ್ಕೆ ಮಾದರಿ ಗ್ರಾಮ ಸಭೆ ಆಯೋಜಿಸಿರುವುದು ಮಕ್ಕಳ ಹಕ್ಕುಗಳ ಬೇಡಿಕೆಗೆ ಅನುಕೂಲಕ್ಕೆ ತಕ್ಕಂತೆ ಜನಪ್ರತಿನಿಧಿ ಅಧಿಕಾರಿಗಳು ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಬೇಕು ಎಂದು ಪಂಚಾಯತ್ ರಾಜ್ ಇಲಾಖೆ ಹಾಗೂ ಐಟಿ, ಬಿಟಿ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ಆನ್‌ಲೈನ್ ಮೂಲಕ ವಿದ್ಯಾರ್ಥಿಗಳಿಗೆ ಶುಭ ಕೋರಿ ಮಾತನಾಡಿದರು.
ಗ್ರಾಮೀಣ ಅಭಿವೃದ್ಧಿ ಪಂಚಾಯತ್ ರಾಜ್ ಇಲಾಖೆ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ವತಿಯಿಂದ ಮನಗಳ್ಳಿ ಪ್ರೌಢಶಾಲೆಯ ಆವರಣದಲ್ಲಿ ಆಯೋಜಿಸಲಾಗಿದ ಮಕ್ಕಳ ವಿಶೇಷ ಗ್ರಾಮ ಸಭೆ ಕಾರ್ಯಕ್ರಮದಲ್ಲಿ ಆನ್‌ಲೈನ್ ಮೂಲಕ ಚಾಲನೆ ನೀಡಿದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಜೊತೆ ಮಾತನಾಡಿದರು.ಮಕ್ಕಳು ದೇಶದ ಆಸ್ತಿ ಹೀಗಾಗಿ ಸರ್ಕಾರಿ ಶಾಲೆಗಳ ಸುಧಾರಣೆಗೆ ಸರ್ವ ರೀತಿಯಲ್ಲಿಯೂ ಕಾರ್ಯಕ್ರಮವನ್ನು ಜನಪ್ರತಿನಿಧಿ ಅಧಿಕಾರಿಗಳು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು. ಎಲ್ಲ ಭರವಸೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಶಾಸಕ ಎಂಆರ್ ಮಂಜುನಾಥ್ ಮೆಚ್ಚುಗೆ:ಶಾಸಕ ಎಂ.ಆರ್. ಮಂಜುನಾಥ್ ಪ್ರಸ್ತಾವಿಕವಾಗಿ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಾಲೂಕಿನ ಮಣ್ಣಗಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಮಕ್ಕಳ ಗ್ರಾಮ ಸಭೆಯನ್ನು ಆಯೋಜನೆ ಮಾಡಲು ಅವಕಾಶ ಕಲ್ಪಿಸಿ ಕಾರ್ಯಕ್ರಮ ಯಶಸ್ವಿಗೊಳಿಸಲು ಪಂಚಾಯತ್ ರಾಜ್ ಇಲಾಖೆ ಮುಖಾಂತರ ಚಾಮರಾಜನಗರ ಜಿಲ್ಲೆ ಮತ್ತು ವಿವಿಧ ಇಲಾಖೆಗಳ ಸಹಯೋಗದಲ್ಲಿ ನಡೆಯುತ್ತಿರುವ ಈ ಉತ್ತಮ ಕಾರ್ಯಕ್ರಮವನ್ನು ವಿದ್ಯಾರ್ಥಿಗಳು ಸದ್ಬಳಕೆ ಮಾಡಿಕೊಂಡು ತಮ್ಮ ಸುತ್ತಮುತ್ತಲಿನ ಶಾಲೆ ಹಾಗೂ ಗ್ರಾಮಗಳಲ್ಲಿರುವ ಸಮಸ್ಯೆಗಳನ್ನು ಸಚಿವರ ಜೊತೆ ಮಾತನಾಡಿದರು.
ಕಾರ್ಯಕ್ರಮದ ಸದುದ್ದೇಶವನ್ನು ತಿಳಿದುಕೊಂಡು ಪೂರಕವಾಗಿ ಸದ್ಬಳಕೆ ಮಾಡಿಕೊಳ್ಳಬೇಕು. ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪಾರದರ್ಶಕತೆ ತರಲು ಮತ್ತು ಹಣಕಾಸು ನಿರ್ವಹಣೆಯನ್ನು ಸುಧಾರಿಸಲು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಮುಖಾಂತರ ಪಂಚತಂತ್ರ ತಂತ್ರಾಂಶವನ್ನು ಆರಂಭಿಸಿ ಈಗ ಕಾರ್ಯಕ್ರಮವನ್ನು ಸುಧಾರಿತ ಆವೃತ್ತಿಯಲ್ಲಿ ಚಾಲ್ತಿಯಲ್ಲಿದೆ. ಪ್ರತಿಯೊಬ್ಬ ನಾಗರಿಕರ ಆಸ್ತಿ ಸಂಬಂಧಿಸಿದಂತೆ ಅನುಮತಿ, ಕಟ್ಟಡ ಮತ್ತು ವ್ಯಾಪಾರ ಮತ್ತು ದೂರುಗಳ ಸಲ್ಲಿಕೆಯಂತಹ ನಾಗರಿಕ ಸೇವೆಗಳನ್ನು ಒದಗಿಸಲು ಆಸ್ತಿ ತೆರಿಗೆ ಸಂಗ್ರಹಣೆಯನ್ನು ನಿರ್ವಹಣೆ ಮಾಡಲು ತಂತ್ರಜ್ಞಾನದ ಮೂಲಕ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ ಎಂದರು.ಉತ್ತಮ ಕಾರ್ಯಕ್ರಮ ನೀಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಾಲೂಕಿಗೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ಸಾರ್ವಜನಿಕರ ನಾಗರಿಕರ ಮತ್ತು ಮಕ್ಕಳ ಅಭಿವೃದ್ಧಿ ಹೆಚ್ಚಿನ ಹೊತ್ತು ನೀಡಿದ್ದಾರೆ ಎಂದು ತಿಳಿಸಿದರು.ಸಮಸ್ಯೆಗೆ ಸಚಿವರಿಂದ ಭರವಸೆ:
ಹನೂರು ಶೈಕ್ಷಣಿಕ ವಲಯದ ಮೂಲೆ ಬೈರನಾಥ ಹಾಗೂ ಮಣ್ಣಗಳ್ಳಿ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳು ಶಾಲೆಗಳಲ್ಲಿ ಶೌಚಾಲಯ ನಿರ್ವಹಣೆ ಕುಡಿಯುವ ನೀರಿನ ಸಮಸ್ಯೆ ಆಟದ ಮೈದಾನ ಮತ್ತು ಸ್ಮಾರ್ಟ್ ಕ್ಲಾಸ್ ನಡೆಸಲು ಬೋರ್ಡ್ ಗಳ ಅಭಿವೃದ್ಧಿಪಡಿಸಿ ಉತ್ತಮ ದರ್ಜೆಯ ಕಿಟ್‌ಗಳನ್ನು ವಿತರಣೆ ಮಾಡುವಂತೆ ಮನವಿ ಮಾಡಿದರು. ಬಸ್ಸಿನ ವ್ಯವಸ್ಥೆ ರಸ್ತೆ ಹಾಗೂ ಗ್ರಾಮಗಳಲ್ಲಿ ರೈತರ ಜಮೀನುಗಳಲ್ಲಿ ಕಾಡುಪ್ರಾಣಿಗಳ ಹಾವಳಿ ಸೇರಿದಂತೆ ಇನ್ನಿತರ ಸಮಸ್ಯೆಗಳನ್ನು ಸಚಿವರ ಜೊತೆ ಕಾರ್ಯಕ್ರಮದಲ್ಲಿ ಸಮಸ್ಯೆ ಸರಮಾಲೆಯನ್ನೇ ತೆರೆದಿಟ್ಟರು.ಸಚಿವರು ವಿದ್ಯಾರ್ಥಿಗಳು ಕೇಳಿರುವ ಸಮಸ್ಯೆಗಳ ಪಟ್ಟಿಯನ್ನು ಮತ್ತು ಅದಕ್ಕೆ ಬೇಕಾಗಿರುವ ಅಭಿವೃದ್ಧಿ ಕಾಮಗಾರಿಗಳಿಗೆ ಅನುಮೋದನೆ ನೀಡಿ ಸರ್ಕಾರಕ್ಕೆ ವರದಿ ಸಲ್ಲಿಸಿದರೆ ಕೂಡಲೇ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.
ಶಿಕ್ಷಣಾಧಿಕಾರಿ ಮಹೇಶ್ ಮಾತನಾಡಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಮುಖಾಂತರ ಸರ್ಕಾರದಿಂದ ಸಿಗುವ ವಿದ್ಯಾರ್ಥಿಗಳಿಗೆ ಸಮವಸ್ತ್ರ ಶೂ ಹಾಗೂ ಅಕ್ಷರ ದಾಸೋಹ ದಿಂದ ಬಿಸಿಯೂಟ ವ್ಯವಸ್ಥೆ ಇನ್ನಿತರ ವ್ಯವಸ್ಥೆಗಳನ್ನು ಇಲಾಖೆಯಲ್ಲಿ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದೆ ಎಂದರು.ಆರೋಗ್ಯ ಇಲಾಖೆಯ ಹಿರಿಯ ತಾಲೂಕು ವೈದ್ಯಾಧಿಕಾರಿ ಪ್ರಕಾಶ್ ಮಾತನಾಡಿ, ಮಕ್ಕಳ ಗ್ರಾಮ ಸಭೆ ಆಯೋಜಿಸುವುದು ಉತ್ತಮ ಕಾರ್ಯಕ್ರಮವಾಗಿದ್ದು ಗ್ರಾಮಗಳಲ್ಲಿ ಬಾಲ್ಯ ವಿವಾಹ ತೊಡೆದು ಹಾಕಲು ಉತ್ತಮ ಕಾರ್ಯಕ್ರಮ ಇದಾಗಿದ್ದು ಆರೋಗ್ಯ ಇಲಾಖೆಯಲ್ಲಿ ಸಿಗುವ ಸೇವೆಗಳನ್ನು ಸದ್ಬಳಕೆ ಮಾಡಿಕೊಳ್ಳುವ ಮೂಲಕ ನಾಗರಿಕರು ವಿದ್ಯಾರ್ಥಿಗಳು ಮುಂದಾಗಬೇಕು ಎಂದರು.
ಪೊಲೀಸ್ ಎಂದರೆ ಭಯಬೇಡ:ಮಕ್ಕಳ ಗ್ರಾಮ ಸಭೆಯಲ್ಲಿ ಸಬ್ ಇನ್ಸ್‌ಪೆಕ್ಟರ್ ಶಿವಕುಮಾರ್ ಮಾತನಾಡಿ, ವಿದ್ಯಾರ್ಥಿಗಳಿಗೆ ಆಪ್ತ ಗೆಳತಿ ಕಾರ್ಯಕ್ರಮವನ್ನು ಪೊಲೀಸ್ ಇಲಾಖೆ ಮುಖಾಂತರ ಯಶಸ್ವಿಯಾಗಿ ನೀಡುವುದರ ಮೂಲಕ ವಿದ್ಯಾರ್ಥಿಗಳನ್ನು ಪೊಲೀಸ್ ಠಾಣೆಗೆ ಕರೆಸಿ, ಪೊಲೀಸ್ ಠಾಣೆ ಎಂದರೆ ಭಯಬೇಡ ನೇರವಾಗಿ ದೂರುಗಳಿದ್ದರೆ ಸಲ್ಲಿಸಿ ಭಯಮುಕ್ತರಾಗಿ ಮಕ್ಕಳು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಲು ಪೊಲೀಸ್ ಇಲಾಖೆ ಜೊತೆ ಸಹಕಾರ ನೀಡಬೇಕು ಎಂದು ಇದೇ ವೇಳೆಯಲ್ಲಿ ತಿಳಿಸಿದರು. ವಿವಿಧ ಇಲಾಖೆಯ ಅಧಿಕಾರಿಗಳು ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಶಾಸಕ ಎಂ.ಆರ್ ಮಂಜುನಾಥ್, ಜಿಲ್ಲಾ ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಮೋನಾ ರೋತ್, ಗ್ರಾಮ ಪಂಚಾಯಿತಿ ಅಧ್ಯಕ್ಷ ಸೋಮಶೇಖರ್, ಗ್ಯಾರಂಟಿ ಯೋಜನೆಗಳ ತಾಲೂಕು ಅಧ್ಯಕ್ಷ ರಾಚಯ್ಯ, ಚಾಮುಲ್ ನಿರ್ದೇಶಕ ಮಹದೇವ ಪ್ರಸಾದ್, ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿ ವೆಂಕಟೇಶ್, ಪಶುಸಂಗೋಪನೆ ಇಲಾಖೆಯ ವೈದ್ಯಾಧಿಕಾರಿ ಸಿದ್ದರಾಜು, ಕಾರ್ಯನಿರ್ವಹಣಾಧಿಕಾರಿ ಉಮೇಶ್, ಮಣ್ಣಗಳ್ಳಿ ಪಿಡಿಒ ರಾಮು ಉಪಸ್ಥಿತರಿದ್ದರು.-------------24ಸಿಎಚ್‌ಎನ್52
ಹನೂರು ಮಣ್ಣಗಳ್ಳಿ ಸರ್ಕಾರಿ ಶಾಲೆಯಲ್ಲಿ ಮಕ್ಕಳ ವಿಶೇಷ ಗ್ರಾಮ ಸಭೆ ಕಾರ್ಯಕ್ರಮವನ್ನು ಶಾಸಕ ಎಂಆರ್ ಮಂಜುನಾಥ್ ವಿದ್ಯಾರ್ಥಿಗಳ ಜೊತೆಗೂಡಿ ಉದ್ಘಾಟನೆ ಗೊಳಿಸಿದರು.-----------