ಮಕ್ಕಳು ಮಾನವೀಯ ಮೌಲ್ಯ ಬೆಳೆಸಿಕೊಳ್ಳಬೇಕು

| Published : Aug 30 2024, 01:05 AM IST

ಮಕ್ಕಳು ಮಾನವೀಯ ಮೌಲ್ಯ ಬೆಳೆಸಿಕೊಳ್ಳಬೇಕು
Share this Article
  • FB
  • TW
  • Linkdin
  • Email

ಸಾರಾಂಶ

ಮಕ್ಕಳು ಶಿಕ್ಷಣ ಪಡೆಯುವುದರ ಜತೆಗೆ ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು ಎಂದು ಪ್ರಧಾನ ಸಿವಿಲ್ ನ್ಯಾಯಾಧೀಶೆ ಶಿಲ್ಪಾ ತಿಮ್ಮಾಪುರ ಹೇಳಿದರು.

ಕನ್ನಡಪ್ರಭ ವಾರ್ತೆ ಹಿರಿಯೂರು : ಮಕ್ಕಳು ಶಿಕ್ಷಣ ಪಡೆಯುವುದರ ಜತೆಗೆ ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು ಎಂದು ಪ್ರಧಾನ ಸಿವಿಲ್ ನ್ಯಾಯಾಧೀಶೆ ಶಿಲ್ಪಾ ತಿಮ್ಮಾಪುರ ಹೇಳಿದರು.

ನಗರದ ಟಿಬಿ ವೃತ್ತದ ಸಮೀಪದ ಡಾ.ಬಿ.ಆರ್.ಅಂಬೇಡ್ಕರ್ ಪದವಿ ಪೂರ್ವ ಕಾಲೇಜಿನಲ್ಲಿ ಬುಧವಾರ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಹಾಗೂ ಅಭಿಯೋಜನ ಇಲಾಖೆ ವತಿಯಿಂದ ಆಯೋಜಿಸಿದ್ದ ಕಾನೂನು ಅರಿವು-ನೆರವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ವಿದ್ಯಾರ್ಥಿಗಳು ಪ್ರೀತಿ-ಪ್ರೇಮದ ವ್ಯಾಮೋಹಕ್ಕೆ ಒಳಗಾಗಿ ತಮ್ಮ ಜೀವನವನ್ನೇ ಹಾಳು ಮಾಡಿಕೊಳ್ಳುತ್ತಿದ್ದಾರೆ. ಆದ್ದರಿಂದ ಮಕ್ಕಳಿಗೆ ಕಾನೂನಿನ ಅರಿವು ಅವಶ್ಯಕವಾಗಿದೆ. ಕಾನೂನು ರಕ್ಷಣೆ ಪ್ರತಿಯೊಬ್ಬರ ಕರ್ತವ್ಯವಾಗಿದ್ದು ಕಾನೂನು ಪಾಲನೆ ವಿಫಲವಾದರೆ ಶಿಕ್ಷೆ ಅನುಭವಿಸಬೇಕಾಗುತ್ತದೆ. ಸದೃಢ ಸಮಾಜ ಕಟ್ಟಲು ಪ್ರತಿಯೊಬ್ಬರು ಕೈಜೋಡಿಸಬೇಕು ಎಂದರು.

ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಕೆ.ರಂಗಪ್ಪ ಮಾತನಾಡಿ, ಪ್ರತಿಯೊಬ್ಬರು ಕಾನೂನು ಅರಿತರೆ ಸಮಾಜದಲ್ಲಿ ಯಾವುದೇ ರೀತಿಯ ಕಾನೂನು ಬಾಹಿರ ಚಟುವಟಿಕೆಗಳು ನಡೆಯುವುದಿಲ್ಲ ಎಂದರು.

ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಜಿ. ಚಿತ್ರಲಿಂಗಪ್ಪ, ಖಜಾoಚಿ ಸೈಯದ್ ನವಾಜ್, ಜಂಟಿ ಕಾರ್ಯದರ್ಶಿ ಬಿ. ವೆಂಕಟೇಶ್ ಶಿಲ್ಪಿ, ವಕೀಲ ಪಾಂಡುರಂಗಪ್ಪ, ಉಪನ್ಯಾಸಕರಾದ ಈ.ನಾಗೇಂದ್ರಪ್ಪ, ಎಚ್.ಆರ್.ಲೋಕೇಶ್, ಶಾಂತಕುಮಾರ್, ಮಂಜು, ಪ್ರಕಾಶ್ ಬಬ್ಬೂರು, ಜಯಪ್ರಕಾಶ್, ರಜಾಕ್ ಸಾಬ್, ಬಿ.ಎಂ.ತಿಪ್ಪೇಸ್ವಾಮಿ ಮುಂತಾದವರು ಹಾಜರಿದ್ದರು.

----

ಚಿತ್ರ 1: ನಗರದ ಟಿಬಿ ವೃತ್ತದ ಸಮೀಪದ ಡಾ.ಬಿ.ಆರ್. ಅಂಬೇಡ್ಕರ್ ಪದವಿ ಪೂರ್ವ ಕಾಲೇಜಿನಲ್ಲಿ ಬುಧವಾರ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಹಾಗೂ ಅಭಿಯೋಜನ ಇಲಾಖೆ ವತಿಯಿಂದ ಕಾನೂನು ಅರಿವು-ನೆರವು ಕಾರ್ಯಕ್ರಮ ಆಯೋಜಿಸಲಾಗಿತ್ತು.