ಸಾರಾಂಶ
ಸಾಧಕ ಶಿಕ್ಷಕರಿಗೆ ಗೌರವ, ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಸಾಂಸ್ಕತಿಕ ಕಾರ್ಯಕ್ರಮ ನಡೆಯಿತು.
ಕನ್ನಡಪ್ರಭವಾರ್ತೆ ಮೂಲ್ಕಿ
ಮಕ್ಕಳು ಮೊಬೈಲ್ ಸಾಮಾಜಿಕ ಜಾಲತಾಣದಿಂದ ದೂರವಿದ್ದು ಶಿಕ್ಷಣಕ್ಕೆ ಮಹತ್ವ ನೀಡಬೇಕು. ಹೆತ್ತವರು ಶಿಕ್ಷಣದ ಜೊತೆಗೆ ಮಕ್ಕಳಿಗೆ ಆಟೋಟಕ್ಕೆ ಸಮಯ ನೀಡಬೇಕು ಎಂದು ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದರು.ಮೂಲ್ಕಿಯ ಶ್ರೀ ನಾರಾಯಣಗುರು ಶಿಕ್ಷಣ ಸಂಸ್ಥೆಯ ಲೀಲಾವತಿ ಜಯ ಸುವರ್ಣ ತೆರೆದ ಸಭಾಂಗಣದಲ್ಲಿ ಜರುಗಿದ ಮೂಲ್ಕಿಯ ಶ್ರೀ ನಾರಾಯಣ ಗುರು ಶಿಕ್ಷಣ ಸಂಸ್ಥೆಯ 45ನೇ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕಾರ್ಯಕ್ರಮವನ್ನು ಉದ್ಘಾಟಿಸಿದ ಶಾಸಕ ಉಮಾನಾಥ ಕೋಟ್ಯಾನ್ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮೂಲ್ಕಿ ಶ್ರೀ ನಾರಾಯಣ ಗುರು ಶಿಕ್ಷಣ ಸಂಸ್ಥೆಯ ಲಲಿತಾ ಆರ್ ಸಾಲ್ಯಾನ್ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಭಾಸ್ಕರ್ ಎಂ. ಸಾಲ್ಯಾನ್ ವಹಿಸಿದ್ದು ಶಿಕ್ಷಣ ಸಂಸ್ತೆಯ ಟ್ರಸ್ತಿ ಭಾರತ್ ಬ್ಯಾಂಕ್ ನ ಚೇರ್ ಮ್ಯಾನ್ ಸೂರ್ಯಕಾಂತ್ ಜಯ ಸುವರ್ಣ, ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಡಾ ದೇವಿ ಪ್ರಸಾದ್ ಶೆಟ್ಟಿ ಬೆಳಪು, ಹೆಜಮಾಡಿ ಬಿಲ್ಲವ ಸಂಘದ ಅಧ್ಯಕ್ಷ ಮೋಹನದಾಸ ಹೆಜ್ಮಾಡಿ ಮತ್ತಿತರರು ಉಪಸ್ಥಿತರಿದ್ದರು. ಮಂಜುಳಾ ಕೆ ವಿ ಸ್ವಾಗತಿಸಿದರು. ಸಹ ಶಿಕ್ಷಕರಾದ ಪುಷ್ಪರಾಜ್, ಪವಿತ್ರ ನಿರೂಪಿಸಿದರು. ಬಳಿಕ ಶೈಕ್ಷಣಿಕ ಮತ್ತು ಕ್ರೀಡಾ ಸಾಧಕ ವಿದ್ಯಾರ್ಥಿಗಳಿಗೆ, ಸಾಧಕ ಶಿಕ್ಷಕರಿಗೆ ಗೌರವ, ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಸಾಂಸ್ಕತಿಕ ಕಾರ್ಯಕ್ರಮ ನಡೆಯಿತು.