ಮಕ್ಕಳು ಬೆಳೆದು ಸಮುದಾಯ ರಾಜ್ಯ, ದೇಶವನ್ನು ಮುನ್ನಡೆಸಬೇಕು : ಮಹಾಂತೇಶ್‌

| Published : Mar 06 2025, 12:35 AM IST

ಮಕ್ಕಳು ಬೆಳೆದು ಸಮುದಾಯ ರಾಜ್ಯ, ದೇಶವನ್ನು ಮುನ್ನಡೆಸಬೇಕು : ಮಹಾಂತೇಶ್‌
Share this Article
  • FB
  • TW
  • Linkdin
  • Email

ಸಾರಾಂಶ

ಕಡೂರು, ಸರ್ಕಾರ ಮಕ್ಕಳ ರಕ್ಷಣೆ ಕುರಿತು ಹಲವಾರು ಯೋಜನೆಗಳನ್ನು ಜಾರಿ ಮಾಡಿದ್ದು, ಮಕ್ಕಳು ಬೆಳೆದು ಸಮುದಾಯ ರಾಜ್ಯ, ದೇಶವನ್ನು ಮುನ್ನಡೆಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಮಹಾಂತೇಶ್ ಭಜಂತ್ರಿ ಹೇಳಿದರು.

- ಬಾಲ್ಯ ವಿವಾಹ ನಿಷೇಧ ಕಾಯ್ದೆ ಮತ್ತು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ ಕುರಿತು ಕಾರ್ಯಾಗಾರ

ಕನ್ನಡಪ್ರಭ ವಾರ್ತೆ, ಕಡೂರುಸರ್ಕಾರ ಮಕ್ಕಳ ರಕ್ಷಣೆ ಕುರಿತು ಹಲವಾರು ಯೋಜನೆಗಳನ್ನು ಜಾರಿ ಮಾಡಿದ್ದು, ಮಕ್ಕಳು ಬೆಳೆದು ಸಮುದಾಯ ರಾಜ್ಯ, ದೇಶವನ್ನು ಮುನ್ನಡೆಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಮಹಾಂತೇಶ್ ಭಜಂತ್ರಿ ಹೇಳಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ತಾಲ್ಲೂಕು ಪಂಚಾಯಿತಿ ಸಂಯುಕ್ತಾಶ್ರಯದಲ್ಲಿ ಕಡೂರಿನ ತಾಲೂಕು ಪಂಚಾಯಿತಿ ಸಭಾಂಗಣ ನಡೆದ ಮಕ್ಕಳ ಹಕ್ಕುಗಳು, ಬಾಲನ್ಯಾಯ ಕಾಯ್ದೆ, ಬಾಲ್ಯ ವಿವಾಹ ನಿಷೇಧ ಕಾಯ್ದೆ ಮತ್ತು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ ಕುರಿತ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಸಂವಿಧಾನದ ಆಶಯದಂತೆ ಸಂವಿಧಾನದಡಿ ಕಾನೂನಾತ್ಮಕವಾಗಿ ಮಕ್ಕಳನ್ನು ರಕ್ಷಣೆ ಮಾಡಬೇಕು. ಸರ್ಕಾರದ ಆಶಯ, ಮಕ್ಕಳು ಯಾವುದೇ ಕಿರುಕುಳ ಅಡೆತಡೆಗಳಿಲ್ಲದೆ ಬಾಲ್ಯ ಅನುಭವಿಸಬೇಕು. ಆಟ ಪಾಠಗಳಲ್ಲಿ ಶಿಕ್ಷಣ ಮತ್ತು ಓಡಾಟಗಳಲ್ಲಿ ತೊಡಗಿದಾಗ ಸದೃಢ ಮನಸ್ಸಿನಿಂದ ಬೆಳೆಯಲು ಸಾಧ್ಯವಾಗುತ್ತದೆ ಎಂದರು.

ಕಾನೂನಿನ ಚೌಕಟ್ಟಿನಲ್ಲಿ ಮಕ್ಕಳ ರಕ್ಷಣೆಯಲ್ಲಿ ಮುಂದಾಗಬೇಕು. ಮಾನವ ಕಳ್ಳ ಸಾಗಣಿಕೆ ಲೈಂಗಿಕ ಶೋಷಣೆಗಾಗಿ ಬಾಲ ಕಾರ್ಮಿಕ ಪದ್ಧತಿ, ಜೀತಕ್ಕಾಗಿ ಹಾಗೂ ಇನ್ನೂ ಮುಂತಾದ ಕೃತ್ಯಗಳನ್ನು ಎಸಗಲು ಮಾನವ ಕಳ್ಳ ಸಾಗಾಣಿಕೆ ಮಾಡುತ್ತಾರೆ. ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮತ್ತು ಕಾರ್ಯದರ್ಶಿ ಬಾಲ್ಯ ವಿವಾಹ ನಿಷೇಧಾಧಿಕಾರಿಗಳು ಹಾಗೂ ಜನನ ಮತ್ತು ಮರಣ ನೋಂದಣಾಧಿಕಾರಿಗಳಾಗಿದ್ದು ಇದರ ಬಗ್ಗೆ ತಮ್ಮ ವ್ಯಾಪ್ತಿಯಲ್ಲಿ ಯಾವುದೇ ಪ್ರಕರಣ ಕಂಡು ಬಂದಲ್ಲಿ ತುರ್ತಾಗಿ ಕ್ರಮ ಕೈಗೊಳ್ಳಬೇಕೆಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಡೂರು ತಾಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ದಿನೇಶ್ ಮಾತನಾಡಿ, ಇಂದು ಮಕ್ಕಳಿಗೆ ಸಂಬಂಧಿಸಿದಂತೆ ತರಬೇತಿ ಆಯೋಜಿಸಿರುವುದು ತುಂಬಾ ಉಪಯುಕ್ತವಾಗಿದೆ. ಸಂಪನ್ಮೂಲ ವ್ಯಕ್ತಿಗಳು ಮಕ್ಕಳಿಗೆ ಸಂಬಂಧಿಸಿದ ಕಾಯ್ದೆಗಳನ್ನು ಕುರಿತು ಮಾಹಿತಿ ನೀಡಲಿದ್ದಾರೆ. ನಮ್ಮ ತಾಲೂಕಿನಲ್ಲಿ ಬಾಲ್ಯವಿವಾಹ ಪ್ರಕರಣ ಗಳು ಕಂಡು ಬರುತ್ತಿದ್ದು ಈಗಾಗಲೇ ನಾವುಗಳು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು ಎಲ್ಲಾ ಇಲಾಖೆಗಳ ಸಹಕಾರದಿಂದ ಬಾಲ್ಯ ವಿವಾಹ ತಡೆಯೋಣ ಎಂದು ಹೇಳಿದರು.

ಕಡೂರು ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶಿವಪ್ರಕಾಶ್ ಮಾತನಾಡಿ, ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಹಿಳೆಯರು ಮತ್ತು ಮಕ್ಕಳಿಗೆ ಸಂಬಂಧಿಸಿದ ಕಾವಲು ಸಮಿತಿಗಳನ್ನು ರಚನೆ ಮಾಡಿದ್ದು ಇದರ ಬಗ್ಗೆ ಮೇಲ್ವಿಚಾರಣೆ ಮಾಡಲಾಗುತ್ತಿದೆ. ನಮ್ಮ ತಾಲೂಕಿನಲ್ಲಿ ಈಗಾಗಲೇ ಬಾಲ್ಯವಿವಾಹಗಳನ್ನು ತಡೆದಿದ್ದು ಕೆಲವೊಂದು ಪ್ರಕರಣಗಳಲ್ಲಿ ಎಫ್.ಐ.ಆರ್. ದಾಖಲಿಸಿದ್ದೇವೆ ಎಂದು ಹೇಳಿದರು.ಕಾರ್ಯಕ್ರಮದಲ್ಲಿ ಚಿಕ್ಕಮಗಳೂರು ಜಿಲ್ಲಾ ಅಂಗವಿಕಲ ಅಧಿಕಾರಿ ವೀರಭದ್ರಯ್ಯ ಉಪಸ್ಥಿತರಿದ್ದರು. 5 ಕೆಸಿಕೆಎಂ 4ಕಡೂರು ತಾಪಂ ಸಭಾಂಗಣದಲ್ಲಿ ನಡೆದ ಬಾಲ್ಯ ವಿವಾಹ ನಿಷೇಧ ಕಾಯ್ದೆ ಮತ್ತು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ ಕುರಿತ ಕಾರ್ಯಾಗಾರವನ್ನು ಮಹಾಂತೇಶ್‌ ಭಜಂತ್ರಿ ಉದ್ಘಾಟಿಸಿದರು. ದಿನೇಶ್‌, ಶಿವಪ್ರಕಾಶ್‌, ವೀರಭದ್ರಯ್ಯ ಇದ್ದರು.