ಸಾರಾಂಶ
ಕನ್ನಡಪ್ರಭ ವಾರ್ತೆ ಮೂಲ್ಕಿಮಕ್ಕಳು ಜೀವನದಲ್ಲಿ ಶಿಸ್ತು, ಸಂಸ್ಕಾರ ಹಾಗೂ ಸಂಸ್ಕೃತಿ ಅಳವಡಿಸಿಕೊಳ್ಳಬೇಕು, ಮಕ್ಕಳ ಪ್ರತಿಭೆ ಅನಾವರಣಕ್ಕೆ ಮಕ್ಕಳ ಹಬ್ಬ ಕಾರ್ಯಕ್ರಮ ಸೂಕ್ತ ವೇದಿಕೆ ಎಂದು ಕಟೀಲು ಕ್ಷೇತ್ರದ ಅರ್ಚಕ ಶ್ರೀ ಹರಿನಾರಾಯಣದಾಸ ಆಸ್ರಣ್ಣ ಹೇಳಿದ್ದಾರೆ.ನಿಡ್ಡೋಡಿ ವಾಯ್ಸ್ ವಾಯ್ಸ್ ಆರಾಧನಾ ತಂಡದ ನೇತೃತ್ವದಲ್ಲಿ ಕಟೀಲು ಸರಸ್ವತೀ ಸದನದಲ್ಲಿ ಜರುಗಿದ ರಾಜ್ಯ ಮಟ್ಟದ ಮಕ್ಕಳ ಹಬ್ಬ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಶ್ರೀನಿಧಿ ದೇವಾಡಿಗ ಶಿಮಂತೂರು ಉದ್ಘಾಟನೆ ನೆರವೇರಿಸಿದರು. ಶ್ರೇಯಾ ಸುಳ್ಯ ಅಧ್ಯಕ್ಷತೆ ವಹಿಸಿದ್ದರು. ಕನ್ನಡ ಸಾಹಿತ್ಯ ಪರಿಷತ್ ಮಾಜಿ ರಾಜ್ಯಾಧ್ಯಕ್ಷ ಡಾ.ಹರಿಕೃಷ್ಣ ಪುನರೂರು, ಕಿನ್ನಿಗೋಳಿ ಯುಗಪುರುಷ ಸಂಪಾದಕ ಭುವನಾಭಿರಾಮ ಉಡುಪ, ಡಾ. ರಾಜೇಶ್ ಆಳ್ವ ಬದಿಯಡ್ಕ, ಪ್ರವೀಣ್ ಕುಮಾರ್ ಕೊಡಿಯಾಲ್‌ಬೈಲ್, ಉದ್ಯಮಿ ಅಗರಿ ರಾಘವೇಂದ್ರರಾವ್, ವಾಯ್ಸ್ ವಾಯ್ಸ್ ಆರಾಧನಾ ತಂಡದ ಮುಖ್ಯಸ್ಥೆ ಪದ್ಮಶ್ರೀ ಭಟ್ ನಿಡ್ಡೋಡಿ, ಸಾಣೂರು ಅರುಣ್ ಶೆಟ್ಟಿಗಾರ್, ಡಾ .ರಾಮಕ್ರಷ್ಣ ಶಿರೂರು, ಚೇತನಾ ಹೆಗಡೆ ಉಪಸ್ಥಿತರಿದ್ದರು.ಕರ್ನಾಟಕದ ವಿವಿಧ ಭಾಗಗಳಿಂದ ಬಂದ ಸುಮಾರು 200ರಷ್ಟು ಮಕ್ಕಳು ಕಟೀಲು ದೇವಿ ಸನ್ನಿಧಿ ಆವರಣದಲ್ಲಿ ಪ್ರತಿಭೆಗಳನ್ನು ಅನಾವರಣಗೊಳಿಸಿದರು.