ಸಾರಾಂಶ
ದಾಬಸ್‍ಪೇಟೆ: ಸರ್ಕಾರಿ ಹಾಗೂ ಅನುದಾನಿತ ಶಾಲಾ ವಿದ್ಯಾರ್ಥಿಗಳ ಕಲಿಕೆಗೆ ಅನುಕೂಲವಾಗಲು ಶಾಸಕರು ಕಳೆದ ಮೂರು ವರ್ಷದಿಂದ ನೋಟ್ ಪುಸ್ತಕ ವಿತರಿಸುತ್ತಿದ್ದಾರೆಂದು ಕಾಂಗ್ರೆಸ್ ಮುಖಂಡ ಅಗಳಕುಪ್ಪೆ ಗೋವಿಂದರಾಜು ತಿಳಿಸಿದರು.
ದಾಬಸ್‍ಪೇಟೆ: ಸರ್ಕಾರಿ ಹಾಗೂ ಅನುದಾನಿತ ಶಾಲಾ ವಿದ್ಯಾರ್ಥಿಗಳ ಕಲಿಕೆಗೆ ಅನುಕೂಲವಾಗಲು ಶಾಸಕರು ಕಳೆದ ಮೂರು ವರ್ಷದಿಂದ ನೋಟ್ ಪುಸ್ತಕ ವಿತರಿಸುತ್ತಿದ್ದಾರೆಂದು ಕಾಂಗ್ರೆಸ್ ಮುಖಂಡ ಅಗಳಕುಪ್ಪೆ ಗೋವಿಂದರಾಜು ತಿಳಿಸಿದರು.
ಪಟ್ಟಣದ ಸಿವಿಜಿ ಗ್ರಾಮಾಂತರ ಪ್ರೌಢಶಾಲೆ ಹಾಗೂ ಪಿಯುಸಿ ಕಾಲೇಜಿನ ಆವರಣದಲ್ಲಿ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್ ವಿತರಿಸಿ ಮಾತನಾಡಿದ ಅವರು, ಈಗಾಗಲೇ ಸೋಂಪುರ ಹೋಬಳಿಯಾದ್ಯಂತ ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ವಿತರಣೆ ಮಾಡಲಾಗಿದೆ ಎಂದರು. ಗ್ರಾಪಂ ಮಾಜಿ ಅಧ್ಯಕ್ಷ ಶಿವಕುಮಾರ್ ಮಾತನಾಡಿ, ಮಕ್ಕಳ ಕಲಿಕೆಗೆ ಅನುಕೂಲವಾಗುವ ವಾತಾವರಣ ಕಲ್ಪಿಸುವ ಜವಾಬ್ದಾರಿ ಪ್ರತಿ ಶಿಕ್ಷಕರ ಮೇಲಿದೆ. ಅದಕ್ಕೆ ಬೇಕಾಗುವ ಸಹಕಾರವನ್ನು ಶಾಸಕರು ಹಾಗೂ ಸ್ಥಳೀಯ ಮುಖಂಡರು ನೀಡುತ್ತೇವೆ ಎಂದರು. ಈ ಸಂದರ್ಭದಲ್ಲಿ ಸೋಂಪುರ ವಿಎಸ್‌ಎಸ್‌ಎನ್ ಮಾಜಿ ಅಧ್ಯಕ್ಷ ಸಿದ್ದರಾಜು, ನಿರ್ದೇಶಕ ಮಂಜುನಾಥ್, ಮಹಾದೇವ್, ಪಾರ್ಥರಾಜು, ಕೆಂಚಪ್ಪ, ಚಿಕ್ಕಣ್ಣ, ಹನುಮಂತರಾಯಪ್ಪ, ಪ್ರಾಂಶುಪಾಲ ಕೋದಂಡರಾಮಯ್ಯ, ಮುಖ್ಯಶಿಕ್ಷಕ ಛತ್ರಪತಿ ಇತರರು ಉಪಸ್ಥಿತರಿದ್ದರು.ಪೋಟೋ 8 : ದಾಬಸ್‍ಪೇಟೆ ಪಟ್ಟಣದ ಸಿವಿಜಿ ಗ್ರಾಮಾಂತರ ಪ್ರೌಢಶಾಲೆ ಹಾಗೂ ಪಿಯುಸಿ ಕಾಲೇಜಿನ ಆವರಣದಲ್ಲಿ ವಿದ್ಯಾರ್ಥಿಗಳಿಗೆ ಕಾಂಗ್ರೆಸ್ ಮುಖಂಡ ಅಗಳಕುಪ್ಪೆ ಗೋವಿಂದರಾಜು ಉಚಿತ ನೋಟ್ ಬುಕ್ ವಿತರಿಸಿದರು. ಗ್ರಾಪಂ ಮಾಜಿ ಅಧ್ಯಕ್ಷ ಶಿವಕುಮಾರ್, ಸೋಂಪುರ ವಿಎಸ್‌ಎಸ್‌ಎನ್ ಮಾಜಿ ಅಧ್ಯಕ್ಷ ಸಿದ್ದರಾಜು, ನಿರ್ದೇಶಕ ಮಂಜುನಾಥ್, ಮಹಾದೇವ್, ಪಾರ್ಥರಾಜು, ಕೆಂಚಪ್ಪ, ಚಿಕ್ಕಣ್ಣ, ಹನುಮಂತರಾಯಪ್ಪ, ಪ್ರಾಂಶುಪಾಲ ಕೋದಂಡರಾಮಯ್ಯ, ಮುಖ್ಯಶಿಕ್ಷಕ ಛತ್ರಪತಿ ಇತರರು ಉಪಸ್ಥಿತರಿದ್ದರು.