ಮಕ್ಕಳು ದುಶ್ಚಟಗಳಿಂದ ದೂರ ಇರಬೇಕು: ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

| Published : Jul 16 2025, 01:30 AM IST

ಮಕ್ಕಳು ದುಶ್ಚಟಗಳಿಂದ ದೂರ ಇರಬೇಕು: ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್
Share this Article
  • FB
  • TW
  • Linkdin
  • Email

ಸಾರಾಂಶ

ಶಾಲೆಗಳಲ್ಲಿ ಶಿಕ್ಷಕರು, ಮನೆಗಳಲ್ಲಿ ಪೋಷಕರು ಮಕ್ಕಳು ದುಶ್ಚಟಗಳಿಂದ ದೂರವಿರುವಂತೆ ನೋಡಿಕೊಳ್ಳ‍ಬೇಕು ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಹೇಳಿದರು.

ಕನ್ನಡಪ್ರಭ ವಾರ್ತೆ ಹೊನ್ನಾಳಿ

ಶಾಲೆಗಳಲ್ಲಿ ಶಿಕ್ಷಕರು, ಮನೆಗಳಲ್ಲಿ ಪೋಷಕರು ಮಕ್ಕಳು ದುಶ್ಚಟಗಳಿಂದ ದೂರವಿರುವಂತೆ ನೋಡಿಕೊಳ್ಳ‍ಬೇಕು ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಹೇಳಿದರು.

ತಾಲೂಕಿನ ಹನುಮಸಾಗರ ಗ್ರಾಮದಲ್ಲಿ ಮಂಗಳವಾರ 2024-25ನೇ ಸಾಲಿನ ಸಂಸದರ ಸ್ಥಳೀಯ ಪ್ರದೇಶಾಭಿವೃದ್ದಿ ಯೋಜನೆಯಡಿಯಲ್ಲಿ ಹಾಗೂ ಪ್ರಧಾನ ಮಂತ್ರಿ ಆದರ್ಶ ಗ್ರಾಮ ಯೋಜನೆಯಡಿಯಲ್ಲಿ ಅನುಕ್ರಮವಾಗಿ ₹15 ಲಕ್ಷ ಅನುದಾನದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎರಡು ಕೋಠಿಗಳ ನಿರ್ಮಾಣ ಕಾಮಗಾರಿ ಮತ್ತು ₹10 ಲಕ್ಷ ಅನುದಾನದಲ್ಲಿ ಗ್ರಾಮದ ಆಂಜನೇಯ ಸೇವಾ ಸಮಿತಿ ಸಮುದಾಯ ಭವನ ನಿರ್ಮಾಣ ಕಾಮಗಾರಿಗಳಿಗೆ ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದರು.

ಈ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶೇಕಡ 90ರಷ್ಟು ದಾಖಲಾತಿಯಾಗಿರುವುದು ಸಂತಸದ ಸಂಗತಿಯಾಗಿದ್ದು, ಶಿಕ್ಷಕರು ಸಾಮಾಜಿಕ ಜವಾಬ್ದಾರಿ ಅರಿತು ಕೆಲಸ ಮಾಡಿ ಎಂದು ಹೇಳಿದ ಅವರು ಶಾಲೆಗಳಲ್ಲಿ ಶಿಕ್ಷಕರು, ಮನೆಗಳಲ್ಲಿ ಪೋಷಕರು ತಮ್ಮ ಮಕ್ಕಳ ಬಗ್ಗೆ ಸದಾ ಗಮನ ಹರಿಸಿ ಅವರು ದುಶ್ಚಟಗಳಿಗೆ ಬಲಿಯಾಗದಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.

ಹೊನ್ನಾಳಿ ತಾಲೂಕಿಗೆ ಸುಮಾರು 65 ಲಕ್ಷ ರು. ಅನುದಾನ ನೀಡಲಾಗಿದೆ. ದಾವಣಗೆರೆಯ ಎಸ್.ಎಸ್.ಕೆ. ಟ್ರಸ್ಟ್‌ವತಿಯಿಂದ ಲಭ್ಯವಾಗುವ ಸೌಲಭ್ಯಗಳನ್ನು ಕೂಡ ಈ ಗ್ರಾಮಕ್ಕೆ ಒದಗಿಸಿಕೊಡಲಾಗುವುದು ಎಂದರು.

ಗ್ರಾಮದ ಮಹಿಳಾ ಸ್ವಸಹಾಯ ಸಂಘಗಳ ಅಭಿವೃದ್ದಿಗೆ ಸಂಸದರ ಲಭ್ಯವಿರುವ ಅನುದಾನ ಒದಗಿಸಿಕೊಡಬೇಕು ಎಂದು ಮನವಿ ಮಾಡಿದಾಗ ಸಮ್ಮತಿಸಿ, ಈ ಭಾಗದ ಅಂಗನವಾಡಿ, ಆಶಾ ಕಾರ್ಯಕರ್ತೆಯವರು ಸೇರಿದಂತೆ ವಿವಿಧ ಮಹಿಳಾ ಸ್ವಸಹಾಯ ಸಂಘಗಳ ಮಹಿಳೆಯವರು ಗ್ರಾಮಸ್ಥರು, ಹಾಗೂ ಮಕ್ಕಳಲ್ಲಿ ಸ್ವಚ್ಛತೆ, ಆರೋಗ್ಯ,ಶಿಕ್ಷಣದ ವಿಷಯವಾಗಿ ಜಾಗೃತಿ ಮೂಡಿಸಬೇಕು ಎಂದು ಹೇಳಿದರು.

ಈ ಗ್ರಾಮದ ಮೂಲಕ ಗದಗ- ಹೊನ್ನಾಳಿ ರಾಜ್ಯ ಹೆದ್ದಾರಿ ಹಾದುಹೋಗುತ್ತಿದ್ದು ಗ್ರಾಮದ ವ್ಯಾಪ್ತಿಯಲ್ಲಿ ಗ್ರಾಮದ ಜನರ ಮತ್ತು ಮಕ್ಖಳ ಸುರಕ್ಷತೆಯ ದೃಷ್ಟಿಯಿಂದ ರಸ್ತೆ ವಿಭಜಕಗಳನ್ನು ಮಾಡಿಸಿಕೊಡಬೇಕು ಎಂದು ಗ್ರಾಮಸ್ಥರು ಬೇಡಿಕೆ ಇಟ್ಟಾಗ ಇದಕ್ಕೆ ಸಕಾರಾತ್ಮಕವಾಗಿ ಸ್ಪದಿಸಿ ಅಧಿಕಾರಿಗಳಿಗೆ ಈ ಬಗ್ಗೆ ಸೂಚನೆ ನೀಡುವುದಾಗಿ ಹೇಳಿದರು.

ಶಾಸಕ ಡಿ.ಜಿ.ಶಾಂತನಗೌಡ ಮಾತನಾಡಿ, ನಮ್ಮ ಕಾಂಗ್ರೆಸ್ ಸರ್ಕಾರ ಚುನಾವಣೆ ಪೂರ್ವದಲ್ಲಿ ನೀಡಿದ್ದ ಗ್ಯಾರಂಟಿ ಭರವಸೆಗಳನ್ನು ಯಶಸ್ವಿಯಾಗಿ ಪೂರೈಸಿದೆ. 25 ಲಕ್ಷ ರು. ಅನುದಾನವನ್ನು ಈ ಗ್ರಾಮದ ರಸ್ತೆ, ಚರಂಡಿ ಅಭಿವೃದ್ದಿಗೆ ನೀಡಲಾಗಿದೆ ಎಂದು ಹೇಳಿದರು.

ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಎಚ್.ಬಿ.ಮಂಜಪ್ಪ, ರಾಜ್ಯ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಎಚ್.ಎ. ಉಮಾಪತಿ, ಗ್ರಾ.ಪಂ. ಅಧ್ಯಕ್ಷೆ ಶೃತಿ, ಉಪಾದ್ಯಕ್ಷ ಹನುಮಂತಪ್ಪ ಗೌಡ, ಹಾಗೂ ಸದಸ್ಯರುಗಳು, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್.ಎ. ಗದ್ದಿಗೇಶ್,ಮುಖಂಡ ಆರ್. ನಾಗಪ್ಪ, ಮುಖಂಡ ಜೀನದತ್ತ, ರಫೀಕ್, ಮಂಜುನಾಥ್, ಚನ್ನನಾಯ್ಕ,ಬಸಮ್ಮ, ನಿರ್ಮಿತಿ ಕೇಂದ್ರದ ಅಧಿಕಾರಿ ಮಂಜುನಾತ್, ಬಿಇಒ ನಿಂಗಪ್ಪ ಅನೇಕರು ಇದ್ದರು.