ಸಾರಾಂಶ
ಜಂತುಹುಳು ನಿವಾರಣೆ ಮಾತ್ರೆ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಡಿಎಚ್‌ಒಕನ್ನಡಪ್ರಭ ವಾರ್ತೆ ಕೊಪ್ಪಳ
ಎಲ್ಲಾ ಮಕ್ಕಳು ಕಡ್ಡಾಯವಾಗಿ ಅಲ್ಬೆಂಡಾಜೋಲ್ ಮಾತ್ರೆಯನ್ನು ತಪ್ಪದೇ ಸೇವಿಸಬೇಕೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಲಿಂಗರಾಜು ಟಿ. ಹೇಳಿದರು.ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಕೊಪ್ಪಳ ತಾಲೂಕಿನ ಹೀರೆಕಾಸನಕಂಡಿ ಶ್ರೀ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಸಂಯುಕ್ತಾಶ್ರಯದಲ್ಲಿ ಸೋಮವಾರ ವಸತಿ ಶಾಲಾ ಆವರಣದಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಜಂತುಹುಳು ನಿವಾರಣೆ ಕಾರ್ಯಕ್ರಮದ ಅಂಗವಾಗಿ ಜಂತುಹುಳು ನಿವಾರಣೆ ಮಾತ್ರೆ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಅಲ್ಬೆಂಡಾಜೋಲ್ ಮಾತ್ರೆಯನ್ನು 1ರಿಂದ 19 ವರ್ಷದ ಎಲ್ಲಾ ಮಕ್ಕಳಿಗೆ ಉಚಿತವಾಗಿ ನೀಡಲಾಗುತ್ತದೆ. ಜಂತುನಿವಾರಕ ಮಾತ್ರೆ ಕೊಡುವುದರಿಂದ, ರಕ್ತಹೀನತೆ ನಿಯಂತ್ರಿಸುತ್ತದೆ. ಪೌಷ್ಠಿಕಾಂಶ ಹೀರುವಿಕೆ ಸುಧಾರಿಸುತ್ತದೆ. ಏಕ್ರಾಗತೆ, ಕಲಿಕಾ ಸಾಮರ್ಥ್ಯ ಹೆಚ್ಚಿಸುತ್ತದೆ ಹಾಗೂ ಶಾಲೆಗಳ ಮತ್ತು ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳ ಹಾಜರಾತಿ ಸುಧಾರಿಸಲು ನೆರವಾಗುತ್ತದೆ. ಪರಿಸರದಲ್ಲಿ ಜಂತುಹುಳು ಕಡಿಮೆ ಮಾಡುವುದರ ಮೂಲಕ ಸಮುದಾಯಕ್ಕೆ ಪ್ರಯೋಜನಕಾರಿಯಾಗಿರುತ್ತದೆ.ಜಿಲ್ಲೆಯ ಎಲ್ಲಾ ಶಾಲೆ, ಕಾಲೇಜು, ವಸತಿಶಾಲೆ, ಬಾಲಮಂದಿರ ಹಾಗೂ ಅಂಗನವಾಡಿ ಕೇಂದ್ರಗಳಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಆರೋಗ್ಯ ಸಿಬ್ಬಂದಿ, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಎಲ್ಲಾ ಶಾಲಾ ಕಾಲೇಜುಗಳಿಗೆ ಭೇಟಿ ನೀಡಿ, ಎಲ್ಲಾ ಮಕ್ಕಳಿಗೆ ಅಲ್ಬೆಂಡಾಜೋಲ್ ಮಾತ್ರೆ ವಿತರಿಸುತ್ತಾರೆ. ಪಾಲಕರು ತಮ್ಮ ಮಕ್ಕಳ ಆರೋಗ್ಯ ಬಗ್ಗೆ ಕಾಳಜಿ ವಹಿಸಿ ಸಮೀಪದ ಶಾಲೆ ಹಾಗೂ ಅಂಗನವಾಡಿ ಕೇಂದ್ರಗಳಿಗೆ ಕಳುಹಿಸಿ ಮಾತ್ರೆಯನ್ನು ಕೊಡಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು. ಜಿಲ್ಲೆಯಲ್ಲಿ ಡಿ.9ರಂದು ಮಾತ್ರೆಗಳನ್ನು ನೀಡಲಾಗಿದ್ದು, ತಪ್ಪಿಹೋದ ಮಕ್ಕಳಿಗೆ ಡಿ.16ಕ್ಕೆ ಮತ್ತೆ ಮಾತ್ರೆಗಳ ವಿತರಣೆ ಮಾಡಲಾಗುತ್ತದೆ ಎಂದರು.
ಜಿಲಾ ಆರ್.ಸಿ.ಎಚ್ ಅಧಿಕಾರಿ ಡಾ. ಪ್ರಕಾಶ ವಿ. ಪ್ರಾಸ್ತಾವಿಕವಾಗಿ ಮಾತನಾಡಿ, ಪ್ರತಿಯೊಬ್ಬರು ವೈಯಕ್ತಿಕ ಸ್ವಚ್ಛತೆ ಕಾಪಾಡಬೇಕು. ಊಟ ಮಾಡುವ ಮೊದಲು, ಶೌಚಾಲಯಕ್ಕೆ ಹೊಗಿ ಬಂದ ನಂತರ ಸೋಪು ಬಳಸಿ ಕೈತೊಳೆಯುವ ವಿಧಾನದ ಕುರಿತು ತಿಳಿಸಿದರು.ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಣ ಮತ್ತು ಸಆಕ್ಷರತಾ ಇಲಾಖೆ ಉಪನಿರ್ದೇಶಕ ಶ್ರಿಶೈಲ ಎಸ್. ಬಿರಾದರ್ ಮಾತನಾಡಿ, ಮಕ್ಕಳಲ್ಲಿ ರಕ್ತಹೀನತೆ ತಡೆಗಟ್ಟಲು ಇಂತಹ ಕಾರ್ಯಕ್ರಮ ಬಹಳಷ್ಟು ಉಪಯೋಗವಾಗಿದೆ. ಆರೋಗ್ಯವಂತ ಸಮಾಜ ನಿರ್ಮಾಣ ಮಾಡುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದರು.
ಪ್ರಾಂಶುಪಾಲ ಮಂಜುನಾಥ ಬೇಳೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಧಿಕಾರಿ ಡಾ. ವೆಂಕಟೇಶ, ಕೊಪ್ಪಳ ತಾಲೂಕು ಆರೋಗ್ಯ ಅಧಿಕಾರಿ ಡಾ. ರಾಮಾಂಜನೇಯ, ನಗರ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಾದ ಡಾ. ವಿನಾಯಕ, ಡಾ. ಮಹೇಶ ಮತ್ತು ಜಿಲ್ಲಾ ಮಟ್ಟದ ಕಾರ್ಯಕ್ರಮದ ಅನುಷ್ಠಾನದ ಅಧಿಕಾರಿಗಳು, ಕಾರ್ಯಕ್ರಮ ವ್ಯವಸ್ಥಾಪಕರು, ಸಂಯೋಜಕ ಮಂಜುನಾಥ, ಆರೋಗ್ಯ ಶಿಕ್ಷಣ ಅಧಿಕಾರಿಗಳು, ಇತರ ಮೇಲ್ವಿಚಾರಕ ವರ್ಗದವರು, ಶಾಲಾ ಶಿಕ್ಷಕರು, ಆಶಾ ಮೇಲ್ವಿಚಾರಕರು, ಆಶಾ ಕಾರ್ಯಕರ್ತೆಯರು ಇತರೆ ಸಿಬ್ಬಂದಿ, ವಿದ್ಯಾರ್ಥಿಗಳು ಭಾಗವಹಿಸಿದ್ದರು.ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಿವಾನಂದ ಕಾರ್ಯಕ್ರಮ ನಿರೂಪಿಸಿದರು. ವಸತಿ ಶಾಲೆಯ ಇಂಗ್ಲಿಷ್ ಶಿಕ್ಷಕ ಸಂತೋಷ್ ಸ್ವಾಗತಿಸಿದರು. ಗಂಗಮ್ಮ ವಂದಿಸಿದರು.