ರಾಷ್ಟ್ರ ನಾಯಕರ ವೇಷಧಾರಿಗಳಾಗಿ ಗಮನ ಸೆಳೆದ ಮಕ್ಕಳು

| Published : Aug 16 2024, 12:49 AM IST

ಸಾರಾಂಶ

ನಗರದ ಹೋಲಿ ಕ್ರೆಸೆಂಟ್ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ಧೂರಿಯಾಗಿ ಆಚರಿಸಲಾಯಿತು.

ರಾಮನಗರ: ನಗರದ ಹೋಲಿ ಕ್ರೆಸೆಂಟ್ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ಧೂರಿಯಾಗಿ ಆಚರಿಸಲಾಯಿತು.

ರಾಷ್ಟ್ರ ನಾಯಕರ ವೇಷಧಾರಿಗಳಾಗಿದ್ದ ಶಾಲೆಯ ಮಕ್ಕಳು ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಗಮನ ಸೆಳೆದರು. ಕಾರ್ಯಕ್ರಮದಲ್ಲಿ ಶಾಲೆಯ ಅಧ್ಯಕ್ಷರಾದ ಡಾ.ಶಾಜಿಯಾ ಮಾತನಾಡಿ, ಸ್ವಾತಂತ್ರ್ಯ ಹೋರಾಟಗಾರರ ಆಲೋಚನೆಗಳು, ಸಿದ್ಧಾಂತಗಳು ಆದರ್ಶಪ್ರಾಯವಾಗಿವೆ. ಅವುಗಳನ್ನು ನಾವು ನಮ್ಮ ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ನಮ್ಮ ಜೀವನವೂ ಸುಂದರವಾಗುತ್ತದೆ ಎಂದು ತಿಳಿಸಿದರು. ಶಾಲೆಯ ಕಾರ್ಯದರ್ಶಿ ಅಲ್ತಾಫ್ ಅಹ್ಮದ್ ಮಾತನಾಡಿ, ಹಲವಾರು ಮಹನೀಯರ ತ್ಯಾಗ, ಬಲಿದಾನಗಳಿಂದ ಸ್ವಾತಂತ್ರ್ಯ ದೊರೆತಿದೆ. ಅದನ್ನು ನಾವು ಕಾಪಾಡಿಕೊಳ್ಳಬೇಕು ಮತ್ತು ದೇಶದ ಪ್ರಗತಿಗೆ ಶ್ರಮಿಸಬೇಕು ಎಂದು ಮಕ್ಕಳಿಗೆ ಕಿವಿಮಾತು ಹೇಳಿದರು. ಶಾಲೆಯ ಟೇಕ್ವಾಂಡೋ ವಿದ್ಯಾರ್ಥಿಗಳಿಂದ ಹಾಗೂ ಶಾಲೆಯ ವಿದ್ಯಾರ್ಥಿಗಳಿಂದ ಪ್ರತಿಭಾ ಪ್ರದರ್ಶನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಸ್ವಾತಂತ್ರ್ಯ ಹೋರಾಟಗಾರರ ವೇಷಧಾರಿಗಳಾದ ಮಕ್ಕಳು ಕಾರ್ಯಕ್ರಮದ ಕೇಂದ್ರಬಿಂದುಗಳಾಗಿ ಗಮನ ಸೆಳೆದರು. ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ಲತಾ ಆನಂದ್, ಪ್ರಾಂಶುಪಾಲರಾದ ಶಿವಮೂರ್ತಿ, ಕಾಲೇಜು ವಿಭಾಗದ ಪ್ರಾಂಶುಪಾಲರಾದ ಸ್ಟ್ಯಾನ್ಲಿಪಾಲ್ ಹಾಗೂ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.