ಉತ್ಸಾಹದಿಂದ ಶಾಲೆಯತ್ತ ಹೆಜ್ಜೆ ಹಾಕಿದ ಮಕ್ಕಳ

| Published : May 30 2024, 12:51 AM IST

ಉತ್ಸಾಹದಿಂದ ಶಾಲೆಯತ್ತ ಹೆಜ್ಜೆ ಹಾಕಿದ ಮಕ್ಕಳ
Share this Article
  • FB
  • TW
  • Linkdin
  • Email

ಸಾರಾಂಶ

ಬೇಸಿಗೆ ರಜಾ ಕಳೆದ ಮಕ್ಕಳು ಎಂದಿನಂತೆ ಶಾಲೆಗಳತ್ತ ಮುಖ ಮಾಡಿದ್ದಾರೆ. ಹಲವಾರು ಶಾಲೆಗಳಲ್ಲಿ ಮಕ್ಕಳನ್ನು ಬರಮಾಡಿಕೊಳ್ಳಲು ಸರ್ವ ಸಿದ್ಧತೆಯನ್ನು ಮಾಡಿಕೊಳ್ಳಲಾಗಿತ್ತು. ತಾಲುಕಿನ ಎಲ್ಲ ಸರ್ಕಾರಿ ಹಾಗೂ ಅನುದಾನಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ೨೦೨೪-೨೫ ನೇ ಸಾಲಿನ ಶಾಲಾ ಶೈಕ್ಷಣಿಕ ಪ್ರಾರಂಭೋತ್ಸವದ ಪೂರ್ವ ಸಿದ್ಧತಾ ಕಾರ್ಯಕ್ರಮ ಬುಧವಾರ ಭರದಿಂದ ಸಾಗಿತು.

ಕನ್ನಡಪ್ರಭ ವಾರ್ತೆ ತುರುವೇಕೆರೆ

ಬೇಸಿಗೆ ರಜಾ ಕಳೆದ ಮಕ್ಕಳು ಎಂದಿನಂತೆ ಶಾಲೆಗಳತ್ತ ಮುಖ ಮಾಡಿದ್ದಾರೆ. ಹಲವಾರು ಶಾಲೆಗಳಲ್ಲಿ ಮಕ್ಕಳನ್ನು ಬರಮಾಡಿಕೊಳ್ಳಲು ಸರ್ವ ಸಿದ್ಧತೆಯನ್ನು ಮಾಡಿಕೊಳ್ಳಲಾಗಿತ್ತು. ತಾಲುಕಿನ ಎಲ್ಲ ಸರ್ಕಾರಿ ಹಾಗೂ ಅನುದಾನಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ೨೦೨೪-೨೫ ನೇ ಸಾಲಿನ ಶಾಲಾ ಶೈಕ್ಷಣಿಕ ಪ್ರಾರಂಭೋತ್ಸವದ ಪೂರ್ವ ಸಿದ್ಧತಾ ಕಾರ್ಯಕ್ರಮ ಬುಧವಾರ ಭರದಿಂದ ಸಾಗಿತು. ಪ್ರತಿಯೊಂದು ಶಾಲೆಗಳಲ್ಲೂ ಶಿಕ್ಷಕರು, ಸಿಬ್ಬಂದಿ, ಮಕ್ಕಳು ಶಾಲಾ ಆವರಣ, ಕೈ ತೋಟದ ಸ್ವಚ್ಛತಾ ಕಾರ್ಯ ಮಾಡಿದರು. ಬಿಸಿಯೂಟ ತಯಾರಿಸುವ ಕೊಠಡಿ, ಅಡುಗೆ ಪಾತ್ರೆಗಳು, ಆಹಾರ ಪದಾರ್ಥಗಳು, ಕುಡಿಯುವ ನೀರಿನ ಟ್ಯಾಂಕ್‌ಗಳನ್ನು ಹಾಗೂ ಶೌಚಾಲಯವನ್ನು ಸಿಬ್ಬಂದಿಗಳು ಶುಚಿಗೊಳಿಸಿದರು. ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ದಾಖಲಾತಿ ಪ್ರಮಾಣ ಹೆಚ್ಚಿಸಲು ಗ್ರಾಮಗಳಲ್ಲಿ ಫ್ಲೆಕ್ಸ್ ಮತ್ತು ಕರಪತ್ರ ಹಂಚುವ ಮೂಲಕ ಶಿಕ್ಷಕರು ಮತ್ತು ಮಕ್ಕಳು ಮನೆಮನೆ ದಾಖಲಾತಿ ಆಂದೋಲನ ನಡೆಸಿದರು.

ಆಯಾ ಶಾಲೆಗಳಲ್ಲಿ ಶಿಕ್ಷಕರು ಮತ್ತು ಶಾಲಾಭಿವೃದ್ಧಿ ಸಮಿತಿಯ ಸದಸ್ಯರು ಸೇರಿ ಸಭೆ ನಡೆಸಿ ಪ್ರಸಕ್ತ ಸಾಲಿನ ಶೈಕ್ಷಣಿಕ ಕಾರ್ಯ ಯೋಜನೆಗಳ ಬಗ್ಗೆ ಚರ್ಚಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಸೋಮಶೇಖರ್ ಕೆಲ ಶಾಲೆಗಳಿಗೆ ಭೇಟಿ ನೀಡಿ ಶಾಲಾ ಪ್ರಾರಂಭೋತ್ಸವದ ಸಿದ್ಧತೆ, ದಾಖಲಾತಿ, ಬಿಸಿಯೂಟದ ವ್ಯವಸ್ಥೆ, ಸಮವಸ್ತ್ರ ಮತ್ತು ಪಠ್ಯಪುಸ್ತಕ ವಿತರಣೆಯ ಸಿದ್ಧತೆಗಳನ್ನು ಪರಿಶೀಲನೆ ನಡೆಸಿದರು. ಶಿಕ್ಷಕರೊಂದಿಗೆ ಸಭೆ ನಡೆಸಿ ಕಳೆದ ಸಾಲಿನ ಫಲಿತಾಂಶದ ಪರಾಮರ್ಶೆ ಮಾಡಿ ಮುಂದಿನ ವರ್ಷದ ಫಲಿತಾಂಶ ಉತ್ತಮ ಪಡಿಸಿಕೊಳ್ಳಬೇಕೆಂದು ಸೂಚಿಸಿದರು.