ಸಾರಾಂಶ
ಮುಂದಿನ ದಿನಗಳಲ್ಲಿ ನಡೆಸುವ ಚಿಂತನೆ । ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ ಆಯೋಜನೆ ಕನ್ನಡಪ್ರಭ ವಾರ್ತೆ ನುಗ್ಗೇಹಳ್ಳಿ
ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ ವತಿಯಿಂದ ಮುಂಬರುವ ದಿನಗಳಲ್ಲಿ ಮುಂಬೈ ಮತ್ತು ಬೆಂಗಳೂರು ನಗರಗಳಲ್ಲಿ ಮಕ್ಕಳ ಸಾಹಿತ್ಯ ಸಮ್ಮೇಳನ ನಡೆಸಲು ಚಿಂತನೆ ನೆಡೆಸಲಾಗಿದೆ ಎಂದು ಶಾಸಕ ಸಿ.ಎನ್. ಬಾಲಕೃಷ್ಣ ತಿಳಿಸಿದರು.ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ ಹೋಬಳಿ ಘಟಕದ ವತಿಯಿಂದ ಆಯೋಜಿಸಿದ್ದ ದ್ವಿತೀಯ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನ ಕಾರ್ಯಕ್ರಮದದಲ್ಲಿ ಮಾತನಾಡಿದರು.
ಕನ್ನಡ ಭಾಷೆಗೆ ಸಾವಿರಾರು ವರ್ಷಗಳ ಇತಿಹಾಸವಿದೆ. ಹೊರ ರಾಜ್ಯಗಳಲ್ಲಿ ಮಕ್ಕಳ ಸಾಹಿತ್ಯ ಸಮ್ಮೇಳನಗಳನ್ನು ನಡೆಸುವ ಮೂಲಕ ಕನ್ನಡ ಭಾಷೆ ಉಳಿಸಿ, ಬೆಳೆಸುವ ಕೆಲಸವನ್ನು ಮಕ್ಕಳ ಸಾಹಿತ್ಯ ಪರಿಷತ್ ಘಟಕ ಮಾಡುತ್ತಿದೆ. ಮಕ್ಕಳ ಸಾಹಿತ್ಯ ಪರಿಷತ್ ಘಟಕ ಪ್ರಾರಂಭಗೊಂಡಿದ್ದು ತಾಲೂಕಿನಿಂದಲೇ ಇಂದು ಇಡೀ ಕರ್ನಾಟಕದ ಜಿಲ್ಲೆ ತಾಲೂಕು ಹೋಬಳಿ ಕೇಂದ್ರಗಳಲ್ಲಿ ಘಟಕ ಪ್ರಾರಂಭಗೊಂಡು ಕ್ರಿಯಾಶೀಲವಾಗಿ ಕೆಲಸ ನಿರ್ವಹಿಸುತ್ತಿದೆ. ಇತ್ತೀಚೆಗೆ ದೆಹಲಿಯಲ್ಲಿ ಕೂಡ ಮಕ್ಕಳ ಸಾಹಿತ್ಯ ಸಮ್ಮೇಳನವನ್ನು ಆಯೋಜಿಸುವ ಮೂಲಕ ದೆಹಲಿಯಲ್ಲೂ ಕೂಡ ಕನ್ನಡದ ಕಂಪು ಪಸರಿಸುವಂತೆ ಮಾಡಲಾಗಿದೆ. ಮುಂಬೈ ಕನ್ನಡಿಗರ ನೆರವಿನೊಂದಿಗೆ ಮುಂಬರುವ ದಿನಗಳಲ್ಲಿ ಮಕ್ಕಳ ಸಾಹಿತ್ಯ ಸಮ್ಮೇಳನವನ್ನು ನಡೆಸಲಾಗುತ್ತದೆ ಎಂದು ಹೇಳಿದರು.ಹಾಸನ ಆದಿಚುಂಚನಗಿರಿ ಶಾಖಾ ಮಠದ ಕಾರ್ಯದರ್ಶಿ ಶಂಭುನಾಥ ಸ್ವಾಮೀಜಿ ಮಾತನಾಡಿ, ಮಕ್ಕಳ ಸಾಹಿತ್ಯ ಸಮ್ಮೇಳನಗಳನ್ನು ನಡೆಸುವ ಮೂಲಕ ಮಕ್ಕಳಲ್ಲಿರುವ ಸಾಹಿತ್ಯವನ್ನು ಹೊರ ತೆಗೆಯಲು ಉತ್ತಮ ವೇದಿಕೆಯಾಗಿದೆ. ಕೇವಲ ರಾಜ್ಯ ದೇಶವಲ್ಲದೆ ಬೇರೆ ದೇಶಗಳಲ್ಲೂ ಮಕ್ಕಳ ಸಾಹಿತ್ಯ ಪರಿಷತ್ ಘಟಕವನ್ನು ತೆರೆಯುವ ಮೂಲಕ ಅಲ್ಲಿಯೂ ಕೂಡ ಸಾಹಿತ್ಯ ಸಮ್ಮೇಳನಗಳನ್ನು ನಡೆಸಬೇಕು ಎಂದರು.
ಸಮ್ಮೇಳನದ ಅಧ್ಯಕ್ಷೆ ಕೆ.ಕಲಾ ಮಾತನಾಡಿ, ಕನ್ನಡ ನಾಡು, ನುಡಿ, ಭಾಷೆ ಉಳಿವಿಗಾಗಿ ಎಲ್ಲರೂ ಒಗ್ಗೂಡಬೇಕು. ನುಗ್ಗೇಹಳ್ಳಿ ಹೋಬಳಿ ಕೇಂದ್ರ ತನ್ನದೇ ಆದ ಇತಿಹಾಸ ಹೊಂದಿದ್ದು ಸುಮಾರು 13 ಶಾಸನಗಳು ಇಲ್ಲಿ ದೊರೆತಿದೆ ಸಾಹಿತ್ಯಿಕವಾಗಿಯೂ ಎಸ್.ಎಲ್. ಬೈರಪ್ಪ ಮತ್ತು ಪಂಕಜ ಅವರಂತಹ ಸಾಹಿತಿಗಳು ಹುಟ್ಟಿರುವುದು ಈ ಪುಣ್ಯಭೂಮಿಯಲ್ಲಿ ಎಂದು ತಿಳಿಸಿದರು.ಮಕ್ಕಳ ಸಾಹಿತ್ಯ ಪರಿಷತ್ ತಾಲೂಕು ಘಟಕದ ಅಧ್ಯಕ್ಷ ಎ.ಎಲ್. ನಾಗೇಶ್, ಹೋಬಳಿ ಘಟಕದ ಅಧ್ಯಕ್ಷ ಸಿದ್ದರಾಜು ಮಾತನಾಡಿದರು.
ಸಮ್ಮೇಳನದ ರಾಷ್ಟ್ರಧ್ವಜಾರೋಹಣವನ್ನು ಅಕ್ಕನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಮಂಜುಳಾ ಬೋರೇಗೌಡ ನೆರವೇರಿಸಿದರು. ಸಮ್ಮೇಳನ ಅಧ್ಯಕ್ಷರ ಮೆರವಣಿಗೆಗೆ ಮಾಜಿ ವಿಧಾನ ಪರಿಷತ್ ಸದಸ್ಯ ಎಂಎ ಗೋಪಾಲಸ್ವಾಮಿ ಚಾಲನೆ ನೀಡಿದರು.ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ ಘಟಕದ ರಾಜ್ಯಾಧ್ಯಕ್ಷ ಸಿ.ಎನ್. ಅಶೋಕ್, ಕ್ಷೇತ್ರ ಶಿಕ್ಷಣಾಧಿಕಾರಿ ದೀಪ, ಸಮೂಹ ಸಂಪನ್ಮೂಲ ಅಧಿಕಾರಿ ಅನಿಲ್, ಇಸಿಒ ನಿತ್ಯಾನಂದ, ಡಯಟ್ ಉಪನ್ಯಾಸಕ ಕೃಷ್ಣೇಗೌಡ, ಮಕ್ಕಳ ಸಾಹಿತ್ಯ ಪರಿಷತ್ ಘಟಕದ ಕಾರ್ಯದರ್ಶಿ ಮಹಾದೇವ್, ಮಹಿಳಾ ಘಟಕದ ಕಾರ್ಯದರ್ಶಿ ನೀಲ ನಾಗೇಶ್, ದೆಹಲಿ ಘಟಕದ ಅಧ್ಯಕ್ಷ ಅರುಣ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಜಲೇಂದ್ರ, ನಿವೃತ್ತ ಬಿಒ ಸೋಮನಾಥ್, ಸಾಹಿತಿಗಳಾದ ಬೆಳಗುಲಿ ಕೆಂಪಯ್ಯ, ಲೋಕೇಶ್, ಗ್ರಾಮ ಪಂಚಾಯಿತಿ ಸದಸ್ಯರಾದ ರವಿಕುಮಾರ್, ಉಮೇಶ್, ಹೋಬಳಿ ಮಕ್ಕಳ ಸಾಹಿತ್ಯ ಪರಿಷತ್ ಘಟಕದ ಅಂತೋನಿ ಪ್ರಸಾದ್, ಚೆನ್ನೇಗೌಡ, ಸಾಹಿತ್ಯ ಪರಿಷತ್ ಘಟಕದ ಅಧ್ಯಕ್ಷ ದೊರೆಸ್ವಾಮಿ, ಲಕ್ಷ್ಮಣ್, ಮಾಜಿ ಅಧ್ಯಕ್ಷ ಸಂತೋಷ್, ಸಿಆರ್‌ಪಿ ಸಂಘದ ಅಧ್ಯಕ್ಷ ಎಚ್.ಟಿ ಮಂಜೇಗೌಡ, ಸಿಆರ್‌ಪಿ ಅಶೋಕ್ ಸುಂದರನ್, ರಾಮಚಂದ್ರು, ಶೇಖರ್, ಶಿಕ್ಷಕಿ ರೇಖಾ ಗಿರೀಶ್, ಆನಂದ್ ಕಾಳೇನಹಳ್ಳಿ, ಜಗದೀಶ್, ಮುಖಂಡರಾದ ಇನಾಸಪ್ಪ, ಗೌಡಪ್ಪ, ಸಂಪತ್ ಕುಮಾರ್ ಇದ್ದರು. ನುಗ್ಗೇಹಳ್ಳಿಯಲ್ಲಿ ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ ಹೋಬಳಿ ಘಟಕದಿಂದ ಆಯೋಜಿಸಿದ್ದ ದ್ವಿತೀಯ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನ ಕಾರ್ಯಕ್ರಮವನ್ನು ಹಾಸನ ಆದಿಚುಂಚನಗಿರಿ ಶಾಖಾ ಮಠದ ಶಂಭುನಾಥ ಸ್ವಾಮೀಜಿ ಉದ್ಘಾಟಿಸಿದರು.
;Resize=(128,128))
;Resize=(128,128))
;Resize=(128,128))
;Resize=(128,128))