ಸಾರಾಂಶ
ಗುಣಮಟ್ಟದ ಶಿಕ್ಷಣ ಹಾಗೂ ಸಂಸ್ಕಾರಯುತ ಶಿಕ್ಷಣ ದೊರೆತರೆ ಮಕ್ಕಳು ಭವಿಷ್ಯ ಉಜ್ವಲವಾಗುತ್ತದೆ ಎಂದು ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್ ತಿಳಿಸಿದರು. ಚಾಮರಾಜನಗರದಲ್ಲಿ ನಡೆದ ಸಂಸ್ಕೃತಿ ಸಂಗಮ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಸಂಸ್ಕೃತಿ ಸಂಗಮ ಕಾರ್ಯಕ್ರಮ
ಚಾಮರಾಜನಗರ: ಗುಣಮಟ್ಟದ ಶಿಕ್ಷಣ ಹಾಗೂ ಸಂಸ್ಕಾರಯುತ ಶಿಕ್ಷಣ ದೊರೆತರೆ ಮಕ್ಕಳು ಭವಿಷ್ಯ ಉಜ್ವಲವಾಗುತ್ತದೆ ಎಂದು ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್ ತಿಳಿಸಿದರು.
ನಗರದ ಜೆಎಸ್‌ಎಸ್ ಪಬ್ಲಿಕ್ ಸ್ಕೂಲ್‌ನ ೧೧ನೇ ವಾರ್ಷಿಕೋತ್ಸವದ ಅಂಗವಾಗಿ ನಡೆದ ಸಂಸ್ಕೃತಿ ಸಂಗಮ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಜಿಲ್ಲಾ ಕೇಂದ್ರದಲ್ಲಿ ಜೆಎಸ್‌ಎಸ್ ಪಬ್ಲಿಕ್ ಸ್ಕೂಲ್ ಆರಂಭಗೊಂಡು ೧೧ ವರ್ಷಗಳ ಅವಧಿಯಲ್ಲಿ ಉತ್ತಮ ಸಾಧನೆ ಮಾಡಿದೆ. ಸಂಸ್ಕಾರಯುತ ಶಿಕ್ಷಣ ಜೊತೆಗೆ ಮಕ್ಕಳಲ್ಲಿ ಶಿಸ್ತು ಮತ್ತು ಕಲಿಕೆಯ ಬಗ್ಗೆ ಹೆಚ್ಚು ಆಸಕ್ತಿಯನ್ನು ಮೂಡಿಸಲು ಇತರೆ ಚಟುವಟಿಕೆಗಳನ್ನು ನಡೆಸುವ ಮೂಲಕ ಗುಣಾತ್ಮಕ ಶಿಕ್ಷಣವನ್ನು ನೀಡುತ್ತಿದೆ. ಇಂಥ ಶಿಕ್ಷಣ ಮಕ್ಕಳಿಗೆ ಭದ್ರ ಬುನಾದಿಯಾಗುತ್ತದೆ ಎಂದು ಹೇಳಿದರು.ಶಿಕ್ಷಣದ ಜತೆಗೆ ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು. ಈ ನಿಟ್ಟಿನಲ್ಲಿ ಜೆಎಸ್‌ಎಸ್ ಮಹಾವಿದ್ಯಾಪೀಠ ಶಿಕ್ಷಣ, ಆರೋಗ್ಯ ಮತ್ತು ಸಂಸ್ಕೃತಿಯನ್ನು ಬಿಂಬಿಸುವ ಶಿಕ್ಷಣವನ್ನು ನೀಡುತ್ತಿದೆ. ಇಂಥ ಶಿಕ್ಷಣದಿಂದ ಜಿಲ್ಲೆ ಹಾಗೂ ರಾಜ್ಯ ಅಭಿವೃದ್ಧಿಯತ್ತ ಸಾಗುತ್ತದೆ. ಸರ್ಕಾರ ಯೋಜನೆಗಳು ಸದ್ಬಳಕೆಯ ಜೊತೆಗೆ ಹೆಚ್ಚು ಪರಿಣಾಮಕಾರಿಯಾಗಿ ಅನುಷ್ಠಾನಗೊಳ್ಳುತ್ತದೆ. ಈ ನಿಟ್ಟಿನಲ್ಲಿ ಜೆಎಸ್‌ಎಸ್ ವಿದ್ಯಾಪೀಠ ಸೇವೆ ಅನನ್ಯ ಎಂದರು.
ವೇದಿಕೆಯಲ್ಲಿ ಶಾಲೆಯಲ್ಲಿ ಕಳೆದ ವರ್ಷದ ಹೆಚ್ಚು ಅಂಕ ಪಡೆದ ಎಲ್‌ಕೆಜಿಯಿಂದ ೧೦ನೇ ತರಗತಿವರೆಗೆ ಅತಿ ಹೆಚ್ಚು ಅಂಕ ಪಡೆದು ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ಹಾಗೂ ನೆನಪಿನ ಕಾಣಿಕೆ ನೀಡಿ ಗಣ್ಯರು ಅಭಿನಂದಿಸಿದರು. ನಂತರ ವಿದ್ಯಾರ್ಥಿಗಳಿಂದ ಸಂಸ್ಕೃತಿ ಕಾರ್ಯಕ್ರಮ ನಡೆಯಿತು.ಜೆಎಸ್‌ಎಸ್ ಸಾರ್ವಜನಿಕ ಸಂಪರ್ಕ ಅಧಿಕಾರಿ ಆರ್.ಎಂ. ಸ್ವಾಮಿ, ಪ್ರಾಂಶುಪಾಲ ಎಚ್.ಎಂ. ಉಮೇಶ್, ಸಹ ಶಿಕ್ಷಕರು, ವಿದ್ಯಾರ್ಥಿಗಳು, ಪೋಷಕರು ಇದ್ದರು.