ಸಾರಾಂಶ
ಮಕ್ಕಳಿಗೆ ಶಿಕ್ಷಣದ ಜೋತೆಗೆ ಕ್ರೀಡೆ, ಸಂಗೀತ ಸೇರಿದಂತೆ ಅವರ ಆಶಯದಂತೆ ಕಲಿಕೆಯಲು ಸೂಕ್ತ ವಾತಾವರಣ ಕಲ್ಪಿಸಬೇಕು. ಶಿಕ್ಷಣದ ಜೊತೆಗೆ ಕ್ರೀಡೆಗೂ ಆದ್ಯತೆ ನೀಡಬೇಕು.
ಕೊಪ್ಪಳ: ಮಕ್ಕಳನ್ನು ಮೊಬೈಲ್ ಹಾಗೂ ಟಿವಿಯಿಂದ ದೂರ ಇಡಬೇಕು. ಪಾಲಕರು ಮೈ ಮರೆಯದೇ ಜಾಗರೂಕರಾಗಿ ಮಕ್ಕಳ ಬಗ್ಗೆ ಕಾಳಜಿ ವಹಿಸಿ, ತೀರಾ ಅಗತ್ಯವಿದ್ದಾಗ ಮಾತ್ರ ಬಳಕೆಗೆ ಅವಕಾಶ ನೀಡಬೇಕು ಎಂದು ಕಿಮ್ಸ್ ನಿರ್ದೇಶಕ ಡಾ.ವಿಜಯನಾಥ ಇಟಗಿ ಹೇಳಿದರು.
ಅವರು ನಗರದ ಕಿನ್ನಾಳ ರಸ್ತೆಯ ಎಜುಕೇರ್ ಇಂಗ್ಲಿಷ್ ಮೀಡಿಯಂ ಸ್ಕೂಲಿನ ವಾರ್ಷಿಕೋತ್ಸವ ಸಮಾರಂಭ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ ನೆರವೇರಿಸಿ ಮಾತನಾಡಿದರು.ಮಕ್ಕಳಿಗೆ ಶಿಕ್ಷಣದ ಜೋತೆಗೆ ಕ್ರೀಡೆ, ಸಂಗೀತ ಸೇರಿದಂತೆ ಅವರ ಆಶಯದಂತೆ ಕಲಿಕೆಯಲು ಸೂಕ್ತ ವಾತಾವರಣ ಕಲ್ಪಿಸಬೇಕು. ಶಿಕ್ಷಣದ ಜೊತೆಗೆ ಕ್ರೀಡೆಗೂ ಆದ್ಯತೆ ನೀಡಬೇಕು ಎಂದರು.ವರದಿಗಾರ ಸೋಮರಡ್ಡಿ ಅಳವಂಡಿ ಮಾತನಾಡಿ, ಹೊಸ ವಿಚಾರಗಳೇ ಜಗತ್ತನ್ನು ಆಳುತ್ತಿವೆ. ಇಂಥ ಚಿಂತನೆ ಮೂಡಿಬರಲು ಮಕ್ಕಳನ್ನು ಕ್ರಿಯಾಶೀಲರನ್ನಾಗಿ ಮಾಡಬೇಕು. ಮಕ್ಕಳಿಗೆ ಅಗಾಧ ಜ್ಞಾನ ಇದ್ದು, ಸಂಸ್ಕಾರ ನೀಡಿದರೆ ಅದು ಬೆಳೆಯಲು ಸಾಧ್ಯವಾಗುತ್ತದೆ. ನಮ್ಮ ಆಲೋಚನೆ ಸಮಾಜಮುಖಿಯಾಗಿರಬೇಕು ಎಂದರು.ನಗರಸಭಾ ಸದಸ್ಯ ಮುತ್ತುರಾಜ ಕುಷ್ಟಗಿ ಮಾತನಾಡಿ, ಪಾಲಕರು ಮಕ್ಕಳ ಆರೋಗ್ಯದ ಕಡೆ ಗಮನ ಹರಿಸಿ, ಕೇವಲ ಓದು ಅಷ್ಟೇ ಜೀವನವಲ್ಲ, ಜಗತ್ತು ಇನ್ನು ವಿಶಾಲವಿದೆ. ಮಕ್ಕಳ ಬಾಲ್ಯವನ್ನು ಕಸಿದುಕೊಳ್ಳಬೇಡಿ ಎಂದು ಹೇಳಿದರು.ನಿವೃತ್ತ ಪ್ರಾಚಾರ್ಯ ಸೋಮನಗೌಡ ಪಾಟೀಲ್ ಮಾತನಾಡಿದರು.ಶಾಲಾ ಸಂಸ್ಥೆ ಅಧ್ಯಕ್ಷ ಡಾ. ಶ್ರೀನಿವಾಸ ಹ್ಯಾಟಿ ಅಧ್ಯಕ್ಷತೆ ವಹಿಸಿದ್ದರು.ಸಮಾಜ ಸೇವಕ ಬಸವರಾಜ ನೀರಘಂಟಿ, ಕರುನಾಡ ಬೆಳಗು ಸಂಪಾದಕ ಸಂತೋಷ ದೇಶಪಾಂಡೆ, ಶಾರದಾ ಇಂಟರ್ ನ್ಯಾಷನಲ್ ಶಾಲೆಯ ಪಿಆರ್‌ಒ ಮೃತ್ಯುಂಜಯ ರಾಂಪೂರ, ಅಂಜುಮನ್ ಕಮಿಟಿ ಅಧ್ಯಕ್ಷ ಆಸಿಫ್ ಕರ್ಕಿಹಳ್ಳಿ, ಶಾಲಾ ಮುಖ್ಯೋಪಾಧ್ಯಾಯ ಗಿರಿಜಾಪತಿ ಸ್ವಾಮಿ ವೇದಿಕೆಯಲ್ಲಿದ್ದರು.ಕಾರ್ಯಕ್ರಮದ ನಂತರ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಕ್ರೀಡೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಕಾರ್ಯಕ್ರಮ ಜರುಗಿತು.