ತಾಲೂಕು ಕೇಂದ್ರವಾದರೂ ಅಭಿವೃದ್ಧಿ ಕಾಣದ ಚಿಟಗುಪ್ಪ

| Published : Oct 08 2024, 01:00 AM IST

ಸಾರಾಂಶ

ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರ ಅಧ್ಯಕ್ಷತೆಯಲ್ಲಿ ನಡೆದ ಸಾರ್ವಜನಿಕರ ಅಹವಾಲು ಸ್ವೀಕಾರ ಜನಸ್ಪಂದನ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಮನವಿ ಸಲ್ಲಿಸಿದರು.

ಕನ್ನಡಪ್ರಭ ವಾರ್ತೆ ಚಿಟಗುಪ್ಪ

ಚಿಟಗುಪ್ಪ ಪಟ್ಟಣವು ತಾಲೂಕು ಕೇಂದ್ರವಾಗಿ ಹಲವು ವರ್ಷಗಳು ಕಳೆದರೂ ಕೂಡ ಇಲ್ಲಿ ಬೇರೆ ತಾಲೂಕು ಕೇಂದ್ರದಂತೆ ಅಭಿವೃದ್ಧಿ ಹೊಂದಿಲ್ಲ ಎಂದು ಪಟ್ಟಣದ ಸಾರ್ವಜನಿಕರು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರಿಗೆ ತಿಳಿಸಿದರು.ಪಟ್ಟಣದಲ್ಲಿ ಸೋಮವಾರ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಾರ್ವಜನಿಕರ ಅಹವಾಲು ಸ್ವೀಕಾರ ಜನಸ್ಪಂದನ ಕಾರ್ಯಕ್ರಮದಲ್ಲಿ ಮನವಿ ಸಲ್ಲಿಸಿದ ಪ್ರಮುಖರು, ಚಿಟಗುಪ್ಪಾದಲ್ಲಿ ಎಲ್ಲಾ ರೀತಿಯ ವ್ಯಾಪಾರ ವಹಿವಾಟು ಒಂದೇ ಸ್ಥಳದಲ್ಲಿ ನಡೆಸುವುದರಿಂದ ಅತೀಯಾದ ಜನಸಂದಣಿ ಉಂಟಾಗಿ ಸಾರ್ವಜನಿಕರಿಗೆ ವಾಹನ ಸಂಚಾರಕ್ಕೂ ತೊಂದರೆಯಾಗುತ್ತಿದೆ. ಆದ್ದರಿಂದ ಜನರ ಹಿತದೃಷ್ಟಿಯಿಂದ ಕೆಲ ಬೇಡಿಕೆಗಳನ್ನು ಈಡೆರಿಸುವಂತೆ ಮನವಿಯಲ್ಲಿ ಕೋರಿದ್ದಾರೆ.

ಮಿನಿ ವಿಧಾನಸೌಧ, ಕ್ರೀಡಾಂಗಣ, 100 ಹಾಸಿಗೆವುಳ್ಳ ಆಸ್ಪತ್ರೆ ಕಟ್ಟಡ ನಿರ್ಮಾಣ ನಿರ್ಮಿಸುವಂತೆ ಹಾಗೂ ತರಕಾರಿ ಮಾರುಕಟ್ಟೆ ವ್ಯಾಪಾರಕ್ಕಾಗಿ ಸ್ಥಳ ನಿಗಧಿ ಹಾಗೂ ಮಾಂಸ ಮಾರುಕಟ್ಟೆ ಅಂಗಡಿಗಳು ಬೇರೆ ಸ್ಥಳಕ್ಕೆ ನಿಗಧಿಪಡಿಸಬೇಕು ಎಂದು ತಿಳಿಸಿದ್ದಾರೆ.

ಪಟ್ಟಣದಲ್ಲಿ ಬೀದಿ ನಾಯಿಗಳ ಕಾಟ ಹೆಚ್ಚಾಗಿದ್ದು, ಮಂಗಗಳ ಮತ್ತು ಕೋತಿಗಳ ಹಾವಳಿ ನಿಯಂತ್ರಿಸವಬೇಕೆಂದು ಮನವಿ ಮಾಡಿಕೊಂಡರು.

ಈ ಸಂದರ್ಭದಲ್ಲಿ ಪ್ರಮುಖರಾದ ಸಚಿನ ಮಠಪತಿ, ಮಲ್ಲಿಕಾರ್ಜುನ ಪಾಟೀಲ್, ಪ್ರವೀಣ ರಾಜಾಪೂರ, ಪ್ರಶಾಂತ ಜವಳೆ, ಸೂರ್ಯಕಾಂತ ಮಠಪತಿ, ವಿಠಲರಾವ, ಬಸ್ಸುರೆಡ್ಡಿ ಸೇರಿದಂತೆ ಇತರರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.