ಚಿತ್ರದುರ್ಗ: ನವೋದ್ಯಮಗಳಿಗೆ ಆರ್ಥಿಕ ನೆರವು

| Published : Feb 08 2024, 01:34 AM IST

ಚಿತ್ರದುರ್ಗ: ನವೋದ್ಯಮಗಳಿಗೆ ಆರ್ಥಿಕ ನೆರವು
Share this Article
  • FB
  • TW
  • Linkdin
  • Email

ಸಾರಾಂಶ

ಕೃಷಿ ಉದ್ಯಮಗಳಿಗೆ ಉತ್ತೇಜನ ನೀಡಲು ನವೋದ್ಯಮ ಎಂಬ ಹೊಸ ಯೋಜನೆ ಅನುಷ್ಠಾನಗೊಳಿಸಲು ರಾಜ್ಯ ಸರ್ಕಾರ ಅನುಮೋದನೆ ನೀಡಿ ಆದೇಶಿಸಿದೆ ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

ಕನ್ನಡಪ್ರಭ ವಾರ್ತೆ ಚಿತ್ರದುರ್ಗ

2023-24ನೇ ಸಾಲಿನ ಆಯವ್ಯಯದಲ್ಲಿ ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ ಮತ್ತು ಕೃಷಿ ಮಾರುಕಟ್ಟೆಗೆ ಸಂಬಂಧಿಸಿದ ವಲಯಗಳಲ್ಲಿ ನಾವಿನ್ಯತೆ ಪ್ರೋತ್ಸಾಯಿಸುವ ನಿಟ್ಟಿನಲ್ಲಿ ಕೃಷಿ ಉದ್ಯಮಗಳಿಗೆ ಉತ್ತೇಜನ ನೀಡಲು ನವೋದ್ಯಮ ಎಂಬ ಹೊಸ ಯೋಜನೆ ಅನುಷ್ಠಾನಗೊಳಿಸಲು ರಾಜ್ಯ ಸರ್ಕಾರ ಅನುಮೋದನೆ ನೀಡಿ ಆದೇಶಿಸಿದೆ ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ..

ಕೃಷಿ ಕ್ಷೇತ್ರದಲ್ಲಿ ಉದ್ಯಮಶೀಲತೆ ಹೆಚ್ಚಿಸಲು ಹಾಗೂ ಗ್ರಾಮೀಣ ಭಾಗದ ಯುವಕರಿಗೆ ಉದ್ಯೋಗ ಸೃಜನೆಗಾಗಿ ಕೃಷಿಯಲ್ಲಿನ ನೂತನ ತಾಂತ್ರಿಕತೆಗಳು ಹಾಗೂ ನವೀನ ಪರಿಕಲ್ಪನೆಗಳ ವಾಣೀಜ್ಯೀಕರಣ ಉತ್ತೇಜಿಸುವ ಗುರಿಯೊಂದಿಗೆ ಕೃಷಿ ನವೋದ್ಯಮ ಕಾರ್ಯಕ್ರಮ ಅನುಷ್ಠಾನಗೊಳಿಸಲು ಯೋಜಿಸಲಾಗಿದೆ.

ಹೊಸ ಕೃಷಿ ನವೋದ್ಯಮಗಳಿಗೆ (Startups at Incubation stage) ಆರ್ಥಿಕ ನೆರವು ಒದಗಿಸಲಾಗುತ್ತದೆ. ಕೃಷಿ ಕ್ಷೇತ್ರದಲ್ಲಿ ನೂತನ ಪರಿಕಲ್ಪನೆಯೊಂದಿಗೆ ಆರಂಬಿಸುವ ಹೊಸ ಕೃಷಿ ನವೋದ್ಯಮಗಳಿಗೆ ಅನುಮೋದಿತ ಯೋಜನಾ ವರದಿಯ ಶೇ.50ರಷ್ಟು ಸಹಾಯಧನವನ್ನು (ಕನಿಷ್ಟ ₹5ಲಕ್ಷದಿಂದ ಗರಿಷ್ಟ ₹20ಲಕ್ಷದವರೆಗೆ) ಬ್ಯಾಂಕ್ ಸಾಲದ ಮುಖಾಂತರ (Backended subsidy) ನೀಡಲಾಗುವುದು. ಕೃಷಿ ಕ್ಷೇತ್ರದಲ್ಲಿ ಈಗಾಗಲೇ ಸ್ಥಾಪಿಸಲಾದ ನವೋದ್ಯಮಗಳ ವಿಸ್ತರಣೆ ಹಾಗೂ ಉನ್ನತೀಕರಣಕ್ಕಾಗಿ ಯೋಜನಾ ವರದಿಯ ಶೇ.50ರಷ್ಟು ಸಹಾಯಧನ (ಕನಿಷ್ಟ ₹20ಲಕ್ಷದಿಂದ ಗರಿಷ್ಟ ₹50ಲಕ್ಷ ವರೆಗೆ) ಬ್ಯಾಂಕ್ ಸಾಲದ ಮುಖಾಂತರ (Backended subsidy) ನೀಡಲಾಗುವುದು. ಕೃಷಿ ನವೋದ್ಯಮಗಳ ಸಾಮಾರ್ಥ್ಯಾಭಿವೃದ್ಧಿ ಕಾರ್ಯಕ್ರಮ (Mentoring & Acceleration Programme) ಆಯ್ಕೆಯಾದ ನವೋದ್ಯಮಿಗಳ ಸಾಮಾರ್ಥ್ಯಾಭಿವೃದ್ಧಿಗೆ ಕೃಷಿ ವಿಶ್ವವಿದ್ಯಾಲಯ, ICAR, CFTRI, CSIR,C-CAMP ಹಾಗೂ ಇತರೆ ಸಂಶೋಧನಾ ಸಂಸ್ಥೆಗಳಾದ ವಿದ್ಯುನ್ಮಾನ ಮಾಹಿತಿ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯಡಿ ಸ್ಥಾಪಿತವಾಗಿರುವ ಕೃಷಿ ನಾವೀನ್ಯತೆಗಾಗಿ ಶ್ರೇಷ್ಟತೆ ಕೇಂದ್ರಗಳ ಮೂಲಕ ತರಬೇತಿ ನೀಡಲಾಗುವುದು. ಈ ಕಾರ್ಯಕ್ರಮಕ್ಕಾಗಿ ಪ್ರತ್ಯೇಕವಾಗಿ ಅನುದಾನ ನಿಗಧಿ ಪಡಿಸಲಾಗಿದ್ದು, ಕೃಷಿ ನವೋದ್ಯಮಿಗಳಿಗೆ ತರಬೇತಿ ನೀಡುವ ಸಂಸ್ಥೆಗಳಿಗೆ ತರಬೇತಿ ಶುಲ್ಕವನ್ನು ಪಾವತಿಸಲಾಗುವುದು ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.