ದೊಡ್ಡ ಉಳ್ಳಾರ್ತಿ ಶಾಲೆಗೆ ಭೇಟಿ ನೀಡಿದ ಅಧಿಕಾರಿಗಳ ತಂಡಚಳ್ಳಕೆರೆ: ತಾಲ್ಲೂಕಿನ ತಳಕು ಹೋಬಳಿಯ ದೊಡ್ಡ ಉಳ್ಳಾರ್ತಿ ಸರ್ಕಾರಿ ಉನ್ನತ್ತೀಕರಿಸಿದ ಪ್ರಾಥಮಿಕ ಶಾಲೆಯ ಕೊಠಡಿಗಳು ಮಳೆ ನೀರಿನಿಂದ ಸೋರುತ್ತಿರುವ ಜೊತೆಗೆ, ಶಾಲಾ ಆವರಣದಲ್ಲಿ ಮಳೆಯ ನೀರು ನಿಂತು ವಿದ್ಯಾರ್ಥಿಗಳು ತರಗತಿಗೆ ಪ್ರವೇಶಿಸಲು ಉಂಟಾದ ಸಮಸ್ಯೆ ಬಗ್ಗೆ ಪತ್ರಿಕೆಯಲ್ಲಿ ವರದಿ ಪ್ರಕಟವಾದ ಬೆನ್ನಹಿಂದೆಯೇ ಕ್ಷೇತ್ರದ ಶಿಕ್ಷಣಾಧಿಕಾರಿ ಕೆ.ಎಸ್.ಸುರೇಶ್ ಮತ್ತು ಜಿಲ್ಲಾ ಪಂಚಾಯಿತಿ ಇಂಜಿನಿಯರಿಂಗ್ ವಿಭಾಗದ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿ ಶಾಲಾ ಕೊಠಡಿಗಳ ದುಸ್ಥಿತಿಯನ್ನು ಪರಿಶೀಲಿಸಿದರು.