ಕರೇಕಲ್ ಕೆರೆ ವೀಕ್ಷಿಸಿದ ಶಾಸಕ ರಘುಮೂರ್ತಿಚಳ್ಳಕೆರೆ: ಕಳೆದ ಸುಮಾರು ೬೦ ವರ್ಷಗಳ ನಂತರ ನಗರದ ನಾಯಕನಹಟ್ಟಿ ರಸ್ತೆಯ ಕರೇಕಲ್ ಕೆರೆ ತುಂಬಿದ್ದು, ಏರಿಯಲ್ಲಿ ಕಾಣಿಸಿಕೊಂಡ ರಂಧ್ರಗಳಿಂದ ಅಪಾಯದ ಮುನ್ಸೂಚನೆ ಹಿನ್ನೆಲೆಯಲ್ಲಿ ಕೋಡಿಪ್ರದೇಶವನ್ನು ಮೂರು ಅಡಿ ಅಗೆದು ಕೆರೆ ನೀರನ್ನು ಹೊರಬಿಟ್ಟಿದ್ದು, ಪ್ರಸ್ತುತ ವಾಸ್ತವ ಪರಿಸ್ಥಿತಿಯನ್ನು ಅವಲೋಕಿಸಲು ಶಾಸಕ ಟಿ.ರಘುಮೂರ್ತಿ ಅವರು ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳು ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.