ಕೌಶಲ್ಯ ತರಬೇತಿ ಪಡೆದು ನಿರುದ್ಯೋಗ ಸಮಸ್ಯೆ ನಿವಾರಿಸಿಕೊಳ್ಳಿಚಳ್ಳಕೆರೆ: ಪ್ರತಿನಿತ್ಯವೂ ದೇಶದಲ್ಲಿ ನಿರುದ್ಯೋಗಿ ಯುವಕರ ಸಂಖ್ಯೆ ಹೆಚ್ಚಾಗುತ್ತಿದೆ. ಪದವಿ, ಸ್ನಾತಕೋತ್ತರ ಪದವಿ ಹಾಗೂ ಕೆಲವೊಂದು ತಾಂತ್ರಿಕ ವಿಷಯದಲ್ಲಿ ಪರಿಣಿತಿ ಹೊಂದಿದ್ದರೂ ಉದ್ಯೋಗ ಪಡೆಯಲು ವಿಳಂಬವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕೌಶಲ್ಯ ತರಬೇತಿ ಕೇಂದ್ರಗಳ ಮೂಲಕ ತರಬೇತಿ ನೀಡಿ, ತರಬೇತಿ ಪಡೆದವರಿಗೆ ವಿದ್ಯಾರ್ಥಿ ವೇತನ ಜೊತೆಗೆ ಉದ್ಯೋಗಾವಕಾಶವನ್ನು ಸಹ ಒದಗಿಸುವ ವ್ಯವಸ್ಥೆಯನ್ನು ಬೆಳಗಾವಿಯ ವಿಶ್ವೇಶ್ವರ ತಾಂತ್ರಿಕ ವಿಶ್ವವಿದ್ಯಾಲಯ ಮಾಡುತ್ತಿದ್ದು, ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಶಾಸಕ ಟಿ.ರಘುಮೂರ್ತಿ ತಿಳಿಸಿದರು.