ಗ್ಯಾರಂಟಿಗಳಿಗೆ ಬಿಜೆಪಿಯಲ್ಲಿ ಅಸಹನೀಯ ವಾತಾವರಣಮುಖ್ಯಮಂತ್ರಿ ಸಿದ್ದರಾಮಯ್ಯನವರು ನೀಡುತ್ತಿರುವ ಉಚಿತ ಗ್ಯಾರೆಂಟಿಗಳನ್ನು ನೋಡಿ ಬಿಜೆಪಿಯಲ್ಲಿ ಅಸಹನೀಯ ವಾತಾವರಣ ಸೃಷ್ಟಿಯಾಗಿದೆ. ಆದ್ದರಿಂದ ಕಾಂಗ್ರೆಸ್ ವಿರುದ್ಧ ಅನಗತ್ಯ ಆರೋಪ ಮಾಡುತ್ತಾ ಕಾಲಹರಣ ಮಾಡುತ್ತಿವೆ. ಇಂತಹ ಶಕ್ತಿಗಳ ವಿರುದ್ಧ ಕಾರ್ಯಕರ್ತರು ಎಚ್ಚೆತ್ತುಕೊಳ್ಳಬೇಕೆಂದು ಚಿತ್ರದುರ್ಗ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಆರ್.ಕೆ. ಸರ್ದಾರ್ ಹೇಳಿದರು.