ನಾಳೆ ಗೀತಗಾಯನ, ಯೋಗ ತರಬೇತಿ, ಕವಿಕಾವ್ಯ ಪರಿಚಯಚಿನ್ಮಯ ಮಯೂರ ಯೋಗ ಕ್ರೀಡಾ ಸಾಂಸ್ಕೃತಿಕ ಸಂಸ್ಥೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಕರ್ನಾಟಕ ಸಂಭ್ರಮ-50, ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ ಎಂಬ ಧ್ಯೇಯ ವಾಕ್ಯದೊಂದಿಗೆ ನಾಡಗೀತೆ, ರಾಷ್ಟ್ರಗೀತೆ, ರೈತಗೀತೆ ಪ್ರಾಯೋಗಿಕ ತರಬೇತಿ ಕನ್ನಡ ಗೀತಗಾಯನ, ಯೋಗ ತರಬೇತಿ ಮತ್ತು ಕವಿಕಾವ್ಯ ಪರಿಚಯ ಕಾರ್ಯಕ್ರಮವನ್ನು ಅ. 4ರ ಶುಕ್ರವಾರ ಮಧ್ಯಾಹ್ನ 2 ಗಂಟೆಗೆ ನಗರದ ಶಿಕ್ಷಕರ ಸರ್ಕಾರಿ ಶಿಕ್ಷಣ ಮಹಾವಿದ್ಯಾಲಯದ ಆವರಣದಲ್ಲಿ ಆಯೋಜಿಲಾಗಿದೆ.