ಇಂದು ವಿಶ್ವ ಹಿಂದೂ ಪರಿಷತ್ ಗಣಪತಿ ವಿಸರ್ಜನೆ ಶೋಭಾಯಾತ್ರೆವಿಶ್ವ ಹಿಂದೂ ಪರಿಷತ್ ವತಿಯಿಂದ ಚಿತ್ರದುರ್ಗದಲ್ಲಿ ಪ್ರತಿಷ್ಠಾಪನೆ ಮಾಡಲಾಗಿರುವ ಹಿಂದೂ ಮಹಾಗಣಪತಿ ವಿಸರ್ಜನೆ ಶೋಭಾಯಾತ್ರೆ ಸೆ.28 ರ ಶನಿವಾರ ವಿಜೃಂಭಣೆಯಿಂದ ನೆರವೇರಲಿದೆ. ಏಷ್ಯಾದ ಎರಡನೇ ಅತಿ ದೊಡ್ಡ ಗಣಪತಿ ಮಹೋತ್ಸವವೆಂದೆ ಖ್ಯಾತಿ ಪಡೆದಿರುವ ವಿಸರ್ಜನೆ ಶೋಭಾಯಾತ್ರೆಗೆ ರಾಜ್ಯದ ವಿವಿಧ ಮೂಲೆಗಳಿಂದ ಹಾಗೂ ನೆರೆ ರಾಜ್ಯಗಳಿಂದ ಮೂರು ಲಕ್ಷಕ್ಕೂ ಹೆಚ್ಚು ಜನರು ಜಮಾವಣೆಗೊಳ್ಳುವ ನಿರೀಕ್ಷೆಯಿದೆ. ಇದಕ್ಕಾಗಿ ಹಿಂದೆಂದೂ ಕಂಡಿರದ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.