ನಾಳೆ ಗ್ರಾಮ ಆಡಳಿತಾಧಿಕಾರಿಗಳ ನೇಮಕಾತಿ ಪರೀಕ್ಷೆಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಇದೇ ಸೆ.29ರಂದು ನಡೆಯುವ ಗ್ರಾಮ ಆಡಳಿತಾಧಿಕಾರಿಗಳ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ ನಡೆಯಲಿದ್ದು, ಪರೀಕ್ಷೆಯನ್ನು ಅತ್ಯಂತ ಪಾರದರ್ಶಕ, ನಿಷ್ಪಕ್ಷಪಾತ, ಪರಿಣಾಮಕಾರಿಯಾಗಿ ನಡೆಸಬೇಕು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ ಅಧಿಕಾರಿಗಳಿಗೆ ಸೂಚನೆ ನೀಡಿದರು.