ಶಿವಮೊಗ್ಗ ಹಾಲು ಒಕ್ಕೂಟದ ಅಭಿವೃದ್ಧಿಗೆ ಶ್ರಮಿಸಿಚಳ್ಳಕೆರೆ: ಗ್ರಾಮೀಣ ಭಾಗಗಳಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘ ಸಂಘಟನಾತ್ಮಕವಾಗಿ ಕಾರ್ಯನಿರ್ವಹಿಸಿ ಲಾಭದತ್ತ ಮುನ್ನಡೆಯಬೇಕು. ಹಾಲು ಉತ್ಪಾದನೆ ಮತ್ತು ಮಾರಾಟ ರೈತರಿಗೆ ವರದಾನವಾಗಿದೆ. ಇತ್ತೀಚೆಗೆ ಹೆಚ್ಚಿನ ಪ್ರಮಾಣದ ಹಾಲು ಒಕ್ಕೂಟಕ್ಕೆ ಹರಿದುಬರುತ್ತಿದ್ದು, ಎಲ್ಲರೂ ಶಿವಮೊಗ್ಗ ಹಾಲು ಒಕ್ಕೂಟದ ಅಭಿವೃದ್ಧಿಗೆ ಶ್ರಮಿಸಬೇಕೆಂದು ಜಿಲ್ಲಾ ನಿರ್ದೇಶಕ ಬಿ.ಸಿ.ಸಂಜೀವಮೂರ್ತಿ ಹೇಳಿದರು.