23 ಲಕ್ಷ ವೆಚ್ಚದಲ್ಲಿ ಅಂಗನವಾಡಿ ಕೇಂದ್ರ ನಿರ್ಮಾಣಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ರಾಜ್ಯದ ಅಭಿವೃದ್ಧಿಪರ ಚಿಂತನೆಗಳಿಗೆ ಹೆಚ್ಚು ಸಹಕಾರ ನೀಡುತ್ತಾ ಬಂದಿದ್ದಾರೆ. ವಿಶೇಷವಾಗಿ ಶೈಕ್ಷಣಿಕ ಪ್ರಗತಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಭಿವೃದ್ಧಿ ಕಾಮಗಾರಿಗಳಿಗೆ ಆರ್ಥಿಕ ನೆರವು ನೀಡುವ ಮೂಲಕ ನೆರವಾಗಿದ್ದಾರೆ ಎಂದು ಶಾಸಕ, ಸಣ್ಣಕೈಗಾರಿಕೆ ಅಭಿವೃದ್ಧಿಮಂಡಳಿ ಅಧ್ಯಕ್ಷ ಟಿ. ರಘುಮೂರ್ತಿ ತಿಳಿಸಿದರು.