ಬಾಲ್ಯವಿವಾಹ ತಡೆಗಟ್ಟುವಲ್ಲಿ ಶಿಕ್ಷಕರ ಪಾತ್ರ ಅಗತ್ಯಬಾಲ್ಯವಿವಾಹ ತಡೆಗಟ್ಟುವಲ್ಲಿ ಶಿಕ್ಷಕರ ಪಾತ್ರ ಮಹತ್ವವಾದದ್ದು ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಎಂ.ವಿ.ವೀಣಾ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ನಗರಸಭೆ ಹಾಗೂ ಶಿಶು ಅಭಿವೃದ್ಧಿ ಯೋಜನೆ ಅವರ ಸಂಯುಕ್ತ ಆಶ್ರಯದಲ್ಲಿ ನಗರದ ಬಾಪೂಜಿ ಬಾಲಕ, ಬಾಲಕಿಯರ ಪ್ರೌಢಶಾಲೆ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಬಾಲ್ಯವಿವಾಹ ನಿಷೇಧ ಅರಿವು ಕಾರ್ಯಕ್ರಮ ಹಾಗೂ ಪೋಷಣ್ ಮಾಸಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.