ರಾಷ್ಟ್ರೀಯ ಲೋಕ ಅದಾಲತ್ ನಲ್ಲಿ 3939 ಪ್ರಕರಣಗಳ ಇತ್ಯರ್ಥಕ್ಕೆ ಗುರಿಚಿತ್ರದುರ್ಗ: ಡಿಸೆಂಬರ್ 14 ರಂದು ನಡೆಯಲಿರುವ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಬಾಕಿ ಇರುವ 44,917 ಪ್ರಕರಣಗಳ ಪೈಕಿ 3939 ಪ್ರಕರಣಗಳ ಇತ್ಯರ್ಥಕ್ಕೆ ಗುರಿ ನಿಗದಿಪಡಿಸಿಕೊಳ್ಳಲಾಗಿದೆ. ಈಗಾಗಲೇ 38 ಪಕ್ರರಣಗಳನ್ನು ಇತ್ಯರ್ಥ ಪಡಿಸಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ರೋಣ ವಾಸುದೇವ ತಿಳಿಸಿದರು.