ಹೈಟೆಕ್ ಆಸ್ಪತ್ರೆಗೆ 2 ಎಕರೆ ಭೂಮಿಗೆ ಪ್ರಸ್ತಾವನೆಪಟ್ಟಣದಲ್ಲಿ ಹೈಟೆಕ್ ಆಸ್ಪತ್ರೆ ಕಟ್ಟಿಸಲು ಎರಡು ಎಕರೆ ಭೂಮಿ ನೀಡುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದೇನೆಂದು ಶಾಸಕ ಡಾ.ಎಂ. ಚಂದ್ರಪ್ಪ ತಿಳಿಸಿದರು. ತಾಲೂಕಿನ ಹಿರೇಎಮ್ಮಿಗನೂರು ಗ್ರಾಮದಲ್ಲಿ ₹60 ಲಕ್ಷ ವೆಚ್ಚದಲ್ಲಿ ನೂತನ ಉಪ ಆರೋಗ್ಯ ಕೇಂದ್ರ ನಿರ್ಮಾಣ ಕಾಮಗಾರಿಗೆ ಶನಿವಾರ ಭೂಮಿ ಪೂಜೆ ಸಲ್ಲಿಸಿ ನಂತರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮೂರು ನೂತನ ಕೊಠಡಿಗಳನ್ನು ಉದ್ಘಾಟಿಸಿ ಮಾತನಾಡಿದರು.