ಚಳ್ಳಕೆರೆಯಲ್ಲಿ ಸ್ವಚ್ಛತಾ ಇ-ಸೇವೆ ಜಾಗೃತಿ ಕಾರ್ಯಕ್ರಮ14 ದೇಶದಲ್ಲಿ ಮೊಟ್ಟಮೊದಲ ಬಾರಿಗೆ ಸ್ವಚ್ಛತಾ ಆಂದೋಲನವನ್ನು ಆರಂಭಿಸಿದ ಮಹಾತ್ಮ ಗಾಂಧೀಜಿಯವರ ಪುಣ್ಯಸ್ಮರಣೆ ಹಿನ್ನೆಲೆಯಲ್ಲಿ ಅ.2ರಂದು ಜಿಲ್ಲಾಧಿಕಾರಿಗಳ ಮಾರ್ಗದರ್ಶನದಲ್ಲಿ ಜಿಲ್ಲೆಯಾದ್ಯಂತ ಸ್ವಚ್ಛತಾ ಅಂದೋಲನ ಆರಂಭಿಸಿದ್ದು, ಚಳ್ಳಕೆರೆ ನಗರಸಭೆ ವ್ಯಾಪ್ತಿಯಲ್ಲಿ ಈ ಕಾರ್ಯಕ್ರಮ ಯಶಸ್ವಿಗೆ ನಗರಸಭೆಯ ಅಧ್ಯಕ್ಷೆ, ಉಪಾಧ್ಯಕ್ಷೆ, ಚುನಾಯಿತ ಸದಸ್ಯರು, ನಾಮಿನಿ ಸದಸ್ಯರು ಹಾಗೂ ಸಾರ್ವಜನಿಕರು ಸಹಕಾರ ನೀಡಬೇಕೆಂದು ಪೌರಾಯುಕ್ತ ಎಚ್.ಜಿ. ಜಗರೆಡ್ಡಿ ತಿಳಿಸಿದರು.