ಪ್ರಜಾಪ್ರಭುತ್ವದ ಸಂರಕ್ಷಣೆಗಾಗಿ ಮಾನವ ಸರಪಳಿ ನಿರ್ಮಾಣರಾಜ್ಯ ಸರ್ಕಾರ ಜನತೆಯ ಕಲ್ಯಾಣಕ್ಕಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತರುವ ಮೂಲಕ ಬಡವರ ಸಂಕಷ್ಟಗಳ ನಿವಾರಣೆಗೆ ಪ್ರಾಮಾಣಿಕ ಪ್ರಯತ್ನ ನಡೆಸುತ್ತಿದೆ. ಮುಖ್ಯಮಂತ್ರಿ ಎಸ್. ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಜನಪರ ಆಡಳಿತ ನೀಡುವಲ್ಲಿ ಯಶಸ್ವಿ ಹೆಜ್ಜೆ ಇಟ್ಟಿದೆ. ಪ್ರಜಾಪ್ರಭುತ್ವದ ಸಂರಕ್ಷಣೆಗಾಗಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನದಂದು ಸಂವಿಧಾನ ಬಗ್ಗೆ ಮಾನವ ಸರಪಳಿ ನಿರ್ಮಿಸಿ ಜಾಗೃತಿ ಮೂಡಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ತಿಳಿಸಿದರು.