ಹೆಚ್‌ಐವಿ, ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ಯುವ ಜನೋತ್ಸವ ಅಂಗವಾಗಿ ಎಚ್‌ಐವಿ, ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯನ್ನು ನಗರದಲ್ಲಿ ಆಯೋಜಿಸಲಾಗಿತು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ತಡೆ ಘಟಕ, ರೆಡ್ ರಿಬ್ಬನ್ ಕ್ಲಬ್ ಕಾಲೇಜುಗಳು, ರಾಷ್ಟ್ರೀಯ ಸೇವಾ ಯೋಜನೆ, ದಾವಣಗೆರೆ ವಿಶ್ವವಿದ್ಯಾನಿಲಯ, ಕ್ರೀಡೆ ಮತ್ತು ಯುವಜನ ಸೇವಾ ಇಲಾಖೆ, ದುರ್ಗ ರನ್ನರ್ಸ್, ಸೌಖ್ಯ ಸಮುದಾಯ ಸಂಸ್ಥೆ, ಸುಚೇತನಾ ನೆಟ್‌ವರ್ಕ್, ಅಭಿವೃದ್ಧಿ ಸೇವಾ ಸಂಸ್ಥೆ, ಜೆಪಿಎನ್ ಗ್ರಾಮೀಣಾಭಿವೃದ್ಧಿ ಸೇವಾ ಸಂಸ್ಥೆ ಸಹಯೋಗದಲ್ಲಿ ಮ್ಯಾರಥಾನ್ ಸ್ಪರ್ಧೆ ಆಯೋಜಿಸಲಾಗಿತ್ತು.