ಮಹಿಳಾ ಆರ್ಥಿಕ ಶಕ್ತಿ ವೃದ್ಧಿಸುವ ಕೆಲಸವಾಗುತ್ತಿದೆಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಮಹಿಳಾ ಸ್ವಸಹಾಯ ಗುಂಪುಗಳ ಆರ್ಥಿಕ ಶಕ್ತಿಯನ್ನು ವೃದ್ಧಿಸುವ ಜತೆಗೆ ಇತರೆ ಸಾಮಾಜಿಕ ಸೇವಾ ಚಟುವಟಿಕೆಗಳಲ್ಲೂ ಸಹ ತಮ್ಮದೇಯಾದ ನಿಸ್ವಾರ್ಥ ಸೇವೆ ಸಲ್ಲಿಸುತ್ತದೆ. ಒಕ್ಕೂಟದ ಎಲ್ಲಾ ಹಂತದ ಪದಾಧಿಕಾರಿಗಳು ಪ್ರಾಮಾಣಿಕ, ದಕ್ಷ ಸೇವೆಯಿಂದ ಸಮಾಜದ ಏಳಿಗೆಗೆ ಶ್ರಮಿಸುವ ಸಂಕಲ್ಪ ಮಾಡಬೇಕೆಂದು ಚಿತ್ರದುರ್ಗ ಪ್ರಾದೇಶಿಕ ವಿಭಾಗದ ನಿರ್ದೇಶಕಿ ಬಿ. ಗೀತಾ ತಿಳಿಸಿದರು.