ಶಿಸ್ತು ಬದ್ಧ ಕರ್ತವ್ಯದ ಮೂಲಕ ಮಕ್ಕಳ ಭವಿಷ್ಯ ರೂಪಿಸಿಶಿಕ್ಷಕರು ಶಿಸ್ತುಬದ್ಧವಾಗಿ ಕರ್ತವ್ಯ ನಿರ್ವಹಿಸುವ ಮೂಲಕ ಮಕ್ಕಳಿಗೆ ಉತ್ತಮ ಭವಿಷ್ಯ ರೂಪಿಸಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್. ಶ್ರೀನಿವಾಸ್ ಹೇಳಿದರು. ಸಮಗ್ರ ಶಿಕ್ಷಣ ಕರ್ನಾಟಕ, ಡಿಎಸ್ಇಆರ್ಟಿ ಮತ್ತು ಚಿತ್ರದುರ್ಗ ಡಯಟ್ ವತಿಯಿಂದ ಪಟ್ಟಣದ ಎಂ.ಎಂ. ಪ್ರೌಢಶಾಲಾ ಸಭಾಂಗಣದಲ್ಲಿ ಹೊಸದಾಗಿ ನೇಮಕವಾಗಿರುವ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಆಯೋಜಿಸಿದ್ದ ಬುನಾದಿ (ಇಂಡಕ್ಷನ್) ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.