ನಾಡಿನ ಪ್ರಗತಿ ಆಧುನಿಕವಾಗಿದೆ, ವ್ಯಕ್ತಿಯ ವ್ಯಕ್ತಿತ್ವ ನಾಶವಾಗಿದೆಆಧುನಿಕವಾಗಿ, ವೈಜ್ಞಾನಿಕವಾಗಿ, ಆರ್ಥಿಕವಾಗಿ, ಸಾಮಾಜಿಕವಾಗಿ, ನಾಡಿನ ಪ್ರಗತಿ ತುಂಬಾ ಆಗಿದೆ. ಆದರೆ ವ್ಯಕ್ತಿಯ ವ್ಯಕ್ತಿತ್ವ ನಾಶವಾಗಿದೆ ಎಂದು ಸಾಣೇಹಳ್ಳಿಯ ಪಂಡಿತಾರಾಧ್ಯ ಸ್ವಾಮೀಜಿ ಹೇಳಿದರು. ತಾಲೂಕಿನ ಸಾಣೇಹಳ್ಳಿಯ ಶ್ರೀ ಮಠದ ಆಶ್ರಯದಲ್ಲಿ ಶಾಲಾ ಕಾಲೇಜುಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಸ್ವಾತಂತ್ರ‍್ಯ ದಿನದ ಧ್ವಜಾರೋಹಣ ನೆರವೇರಿಸಿ, ಧ್ವಜವಂದನೆ ಸ್ವೀಕರಿಸಿ ಮಾತನಾಡಿದರು.