ಹಿರಿಯೂರು ನಗರದಲ್ಲಿ ಸಂಭ್ರಮದ ಈದ್ ಆಚರಣೆನಗರದಲ್ಲಿ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಮುಸ್ಲಿಂ ಬಾಂಧವರು ನಗರದ ಪ್ರಮುಖ ಬೀದಿಗಳಲ್ಲಿ ವಿಜೃಂಭಣೆಯಿಂದ ಮೆರವಣಿಗೆ ನಡೆಸಿ ಮಸೀದಿಗಳಿಗೆ ತೆರಳಿ ಪ್ರಾರ್ಥನೆ ಸಲ್ಲಿಸಿದರು. ಪ್ರವಾದಿ ಮಹಮ್ಮದ್ ರ ಜನ್ಮ ದಿನವಾದ್ದರಿಂದ ಮುಸ್ಲಿಂ ಸಮುದಾಯದವರು ಈ ಹಬ್ಬವನ್ನು ಅದ್ಧೂರಿಯಾಗಿ ಆಚರಿಸುತ್ತಾರೆ. ಸಮಾಜದಲ್ಲಿ ಶಾಂತಿ, ನೆಮ್ಮದಿ, ಸೌಹಾರ್ದತೆ, ಸಾಮರಸ್ಯ ಮೂಡಿಸುವ ಸಂದೇಶವನ್ನು ಪಾಲಿಸುವುದಕ್ಕಾಗಿ ಈ ಹಬ್ಬ ಮಹತ್ವದ್ದಾಗಿದೆ.