ನಾಗಮಂಗಲ ಕೋಮು ಗಲಭೆ ಖಂಡಿಸಿ ಪ್ರತಿಭಟನೆಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ಸಂದರ್ಭದಲ್ಲಿ ಮೆರವಣಿಗೆಯ ಮೇಲೆ ಕಲ್ಲು ತೂರಿ ಹಿಂಸಾಚಾರ ನಡೆಸಿ, ಸಾರ್ವಜನಿಕರ ಆಸ್ತಿಪಾಸ್ತಿಗೆ ನಷ್ಟವನ್ನುಂಟು ಮಾಡಿದ ಮತಾಂದ ಕಿಡಿಗೇಡಿಗಳ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯಿಸಿ ಸಾರ್ವಜನಿಕ ಗಣೇಶೋತ್ಸವ ಮಂಡಳಿ ಒಕ್ಕೂಟ, ನಾಗರೀಕ ಸಮಿತಿ ಪ್ರತಿಭಟನೆ ನಡೆಸಿ, ತಮ್ಮ ಆಕ್ರೋಶವನ್ನು ಹೊರಹಾಕಿದರು.