ಮಲೇರಿಯಾ ರೋಗ ವ್ಯಾಪಿಸದಂತೆ ಜಾಗೃತಿಮಲೇರಿಯಾ ರೋಗ ಹರಡದಂತೆ ಜಾಗ್ರತೆ ವಹಿಸಲು, ಸಾರ್ವಜನಿಕರು ಆರೋಗ್ಯ ಇಲಾಖೆಯ ಸಲಹೆ, ಸೂಚನೆಗಳನ್ನು ತಪ್ಪದೇ ಪಾಲಿಸಬೇಕು ಎಂದು ಗೋಪನಹಳ್ಳಿ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಬಿಂದುಶ್ರೀ ತಿಳಿಸಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ತಾಲೂಕು ಆರೋಗ್ಯ ಇಲಾಖೆ ಸಹಯೋಗದಲ್ಲಿ ನಡೆಯುತ್ತಿರುವ ಮಲೇರಿಯಾ ವಿರೋಧಿ ಮಾಸಾಚಾರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.