ಗಣೇಶ ಉತ್ಸವದ ಶೋಭಾಯಾತ್ರೆ ಯಶಸ್ವಿಗೊಳಿಸಿಸುಮಾರು ಆರು ವರ್ಷಗಳಿಂದ ನಗರದ ಬಿಇಒ ಕಚೇರಿ ಆವರಣದಲ್ಲಿ ಹಿಂದೂ ಮಹಾಗಣಪತಿ ಪೂಜಾ ಕಾರ್ಯವನ್ನು ನೆರವೇರಿಸುತ್ತಿದ್ದು, ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳ ಸಹಯೋಗದೊಂದಿಗೆ ಈ ಕಾರ್ಯಕ್ರಮ ಯಶಸ್ವಿಯಾಗಿ ನಡೆಯುತ್ತಿದೆ. ಶೋಭಾಯಾತ್ರೆಯೂ ಸೇರಿದಂತೆ ಗಣೇಶನ ಉತ್ಸವಕ್ಕೆ ಹೆಚ್ಚಿನ ಸಹಕಾರ ನೀಡಬೇಕೆಂದು ಹಿಂದೂ ಮಹಾಗಣಪತಿ ಉತ್ಸವ ಸಮಿತಿ ಅಧ್ಯಕ್ಷ ಕೆ.ಸಿ.ನಾಗರಾಜು ಮನವಿ ಮಾಡಿದರು.