ಬಡ ಜನರ ಬದುಕು ಹಸನುಗೊಳಿಸಿದ ಗ್ಯಾರಂಟಿಗಳುಐದು ಪ್ರಮುಖ ಗ್ಯಾರಂಟಿಗಳ ಅನುಷ್ಠಾನದ ಮೂಲಕ ಬಡ ಜನತೆಯ ಬದುಕನ್ನು ಹಸನುಗೊಳಿಸಲು ಸರ್ಕಾರ ಕಳೆದ 15ತಿಂಗಳಿನಿಂದ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಿದೆ. ತಾಲೂಕಿನಲ್ಲಿ ಈ ಯೋಜನೆಯ ಗುಣಾತ್ಮಕ ಅನುಷ್ಠಾನಕ್ಕಾಗಿ ಸಮಿತಿ ಜಾರಿಗೆ ತಂದಿದ್ದು, ಗ್ಯಾರಂಟಿ ಯೋಜನೆಗಳು ಜನರ ಅಭ್ಯುದಯಕ್ಕೆ ಪ್ರೇರಣಾ ಶಕ್ತಿಯಾಗಿವೆ ಎಂದು ಕ್ಷೇತ್ರದ ಶಾಸಕ, ಸಣ್ಣ ಕೈಗಾರಿಕೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಟಿ. ರಘುಮೂರ್ತಿ ತಿಳಿಸಿದರು.