ಜಿ.ದೇವರಹಳ್ಳಿ: ಮಕ್ಕಳಿಗೆ ಬಯಲಿನಲ್ಲೇ ಪಾಠ ಕೇಳುವ ದುಸ್ಥಿತಿ ಶಿಕ್ಷಣ ಕ್ಷೇತ್ರದಲ್ಲಿ ಹಲವಾರು ಬದಲಾವಣೆಗಳನ್ನು ತಂದು ಶಿಕ್ಷಣ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಒತ್ತು ನೀಡಲಾಗುತ್ತಿದೆ ಎಂಬ ಪ್ರಚಾರವನ್ನು ಶಿಕ್ಷಣ ಇಲಾಖೆ ಕೈಗೊಂಡಿದೆ. ಆದರೆ ಇಂದಿಗೂ ಅನೇಕ ಶಾಲೆಗಳಲ್ಲಿ ಕೊಠಡಿ, ಕಾಂಪೌಂಡ್, ಶೌಚಾಲಯ, ಮಕ್ಕಳು ಕುಳಿತು ಊಟ ಮಾಡಲು ಸ್ಥಳವಿಲ್ಲದ ಹತ್ತಾರು ಸಮಸ್ಯೆಗಳ ನಡುವೆ ಹಲವಾರು ಸಮಸ್ಯೆಗಳನ್ನು ಹೊಂದಿದ ತಾಲೂಕಿನ ತಳಕು ಹೋಬಳಿಯ ದೇವರೆಡ್ಡಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜಿ.ದೇವರಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ದುಸ್ಥಿತಿ ನೋಡಿದರೆ ಶಿಕ್ಷಣ ಇಲಾಖೆ ಮಕ್ಕಳಿಗೆ ಕನಿಷ್ಠ ಸೌಲಭ್ಯವನ್ನು ನೀಡದೆ ನಿರ್ಲಕ್ಷ್ಯ ವಹಿಸುತ್ತಿದೆ.