ವಿಜೃಂಭಣೆ ಗೂಳಿಹಟ್ಟಿ ಕರಿಯಮ್ಮ ರಥೋತ್ಸವತಾಲೂಕಿನ ಗೂಳಿಹಟ್ಟಿ ಗ್ರಾಮದ ಕರಿಯಮ್ಮ ದೇವಿ ರಥೋತ್ಸವವೂ ಶನಿವಾರ ನೂರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಜರುಗಿತು.ಕರಿಯಮ್ಮ ದೇವಿ ರಥೋತ್ಸವವನ್ನ ಕಣ್ತುಂಬಿಕೊಳ್ಳಲು ಸುತ್ತಮುತ್ತಲಿನ ಗ್ರಾಮದ ಭಕ್ತರು ಬೆಳಗ್ಗೆಯಿಂದಲೇ ಜಾತ್ರೆಗಾಗಿ ಬಂದಿದ್ದು, ಬಿಡುವಿಲ್ಲದಂತೆ ಪೂಜಾ ಕಾರ್ಯಗಳು ನಡೆದವು. ಭಕ್ತರು ಸರತಿ ಸಾಲಿನಲ್ಲಿ ನಿಂತು ದೇವಿಯ ದರ್ಶನ ಪಡೆದರು.