ಕಾರಜೋಳ ಮಾದಿಗ, ಆದ್ರೆ ಚುನಾವಣೆಯಲ್ಲಿ ತಪ್ಪು ಹೆಜ್ಜೆ ಇಟ್ರು ಗೋವಿಂದ ಕಾರಜೋಳ ಮಾದಿಗ ಸಮುದಾಯದವರೇ ಆಗಿದ್ದಾರೆ. ಅವರು ಬುದ್ಧಿವಂತರಾಗಿದ್ದರೆ ಇಲ್ಲಿಗೆ ಬಂದು ಸ್ಪರ್ಧೆ ಮಾಡುತ್ತಿರಲಿಲ್ಲ. ಮಾದಿಗರು ಗೆಲ್ಲುವ ಕಡೆ ಯಾಕೆ ಬಂದು ತೊಂದರೆ ಕೊಡ್ತೀಯ ಅಂತ ಸೂಕ್ಷ್ಮವಾಗಿ ಹೇಳಿದ್ದೆ, ಆದರೆ ಅವರು ಕಿವಿಗೆ ಹಾಕಿಕೊಳ್ಳಲಿಲ್ಲವೆಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು.