ವಿಶ್ವಕ್ಕೆ ಸಮಾನತೆ ಸಂದೇಶ ಸಾರಿದ್ದ ಬಸವಣ್ಣಹೊಳಲ್ಕೆರೆ: ಮೇಲು-ಕೀಳು, ಬಡವ-ಬಲ್ಲಿದ, ಸ್ತ್ರೀ-ಪುರುಷ ಎನ್ನುವ ಅಸಮಾನತೆಯಿಲ್ಲದ ಹನ್ನೆರಡನೇ ಶತಮಾನದ ಕ್ರಾಂತಿಕಾರಿ ಬಸವಣ್ಣನವರ ಆಚಾರ, ವಿಚಾರ ಯಾವುದೇ ಒಂದು ಜನಾಂಗಕ್ಕೆ ಸೀಮಿತವಲ್ಲ. ಇಡಿ ಮನುಕುಲಕ್ಕೆ ಸಮಾತನೆಯ ಸಂದೇಶ ಸಾರಿದ ಹರಿಕಾರ ಎಂದು ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾ ರಾಜ್ಯಾಧ್ಯಕ್ಷ ಶಂಕರ್ ಮಹದೇವ ಬಿದರಿ ಹೇಳಿದರು.