ಪ್ರತಿದಿನ ನೀರಿಗಾಗಿ ಕಾಲಿಕೊಡ ಹಿಡಿದು ಓಡಾಡೋ ಮಹಿಳೆಯರುತಾಲೂಕಿನ ನನ್ನಿವಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವರವಿನೋರಹಟ್ಟಿ ಗ್ರಾಮದಲ್ಲಿ ಕುಡಿಯುವ ನೀರಿನ ಅಭಾವ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಮಹಿಳೆಯರು ಹಗಲುರಾತ್ರಿ ಎನ್ನದೇ ಕೊಡಗಳನ್ನು ಹಿಡಿದು ಗ್ರಾಮದಲ್ಲಿ ಓಡಾಡುತ್ತಾ ಕುಡಿಯುವ ನೀರಿಗಾಗಿ ಪರಿತಪಿಸುತ್ತಿದ್ದಾರೆ.