ಕಲ್ಲು ಗಣಿಗಾರಿಕೆ ಚಟುವಟಿಕೆ ಮೇಲೆ ಹದ್ದಿನ ಕಣ್ಣು: ಜಿಲ್ಲಾಧಿಕಾರಿ ಟಿ.ವೆಂಕಟೇಶ್ಜಿಲ್ಲೆಯಲ್ಲಿನ ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಕಲ್ಲು ಗಣಿಗಾರಿಕೆ ಪ್ರದೇಶದಲ್ಲಿ ನಿಯಮಾನುಸಾರ ಅನುಮತಿ ಪಡೆದು ಬ್ಲಾಸ್ಟಿಂಗ್ ನಡೆಸಲಾಗುತ್ತಿದೆಯೇ, ವನ್ಯ ಜೀವಿಗಳ ಮೇಲೆ ಗಣಿಗಾರಿಕೆ ವ್ಯತಿರಿಕ್ತ ಪರಿಣಾಮಗಳು ಉಂಟಾಗುತ್ತಿವೆಯೇ ಎಂಬುದನ್ನು ಪರಿಶೀಲಿಸಿ ವರದಿ ನೀಡಲು, ಉಪವಿಭಾಗಾಧಿಕಾರಿ ನೇತೃತ್ವದಲ್ಲಿ ಅರಣ್ಯ, ಗಣಿ ಮತ್ತು ಭೂ ವಿಜ್ಞಾನ, ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ಕರ್ನಾಟಕ ರಾಜ್ಯ ದೂರ ಸಂವೇದಿ ಅನ್ವಯಿಕ ಕೇಂದ್ರ (ಕೆಎಸ್ಆರ್ ಎಸ್ ಎಸಿ) ಅಧಿಕಾರಿಗಳ ಸಮಿತಿ ರಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದರು.