ಭದ್ರಾ ಮೇಲ್ದಂಡೆ ಹಣ ಬಿಡುಗಡೆಗೆ ಹಕ್ಕೊತ್ತಾಯಭದ್ರಾಮೇಲ್ದಂಡೆ ಯೋಜನೆಗೆ 5300 ಕೋಟಿ ರು. ಬಿಡಗಡೆ ಮಾಡದ ಕೇಂದ್ರ ಸರ್ಕಾರದ ನಡೆ ವಿರೋಧಿಸಿ ಸಂಸದರ ಕಚೇರಿ ಎದುರು ಕಳೆದ 18 ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ, ಅಖಂಡ ಕರ್ನಾಟಕ ರೈತ ಸಂಘ ವಿವಿಧ ಜನಪರ, ಪ್ರಗತಿಪರ, ದಲಿತ ಸಂಘಟನೆಗಳಿಂದ ನಗರದಲ್ಲಿ ಪಂಜಿನ ಮೆರವಣಿಗೆ ನಡೆಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರಗಳನ್ನು ಕೂಗಲಾಯಿತು.