ಭದ್ರೆಗೆ ಅನುದಾನ ಕೊಡದಿದ್ರೆ ಬಿಜೆಪಿ ವಿರುದ್ದ ಅಭಿಯಾನಭದ್ರಾಮೇಲ್ದಂಡೆ ಯೋಜನೆಯನ್ನು ಶೀಘ್ರವಾಗಿ ಜಾರಿಗೊಳಿಸುವಂತೆ ಜಿಲ್ಲಾ ಪಂಚಾಯಿತಿ ಎದುರು ಕೇಂದ್ರ ಸರ್ಕಾರದ ವಿರುದ್ಧ ಕಳೆದ ಹತ್ತು ದಿನಗಳಿಂದ ಧರಣಿ ನಡೆಸುತ್ತಿರುವ ರೈತ ಸಂಘ ಹಾಗೂ ಹಸಿರುಸೇನೆ, ಅಖಂಡ ಕರ್ನಾಟಕ ರೈತ ಸಂಘ, ಜನಪರ, ಪ್ರಗತಿಪರ, ದಲಿತಪರ ಸಂಘಟನೆಗಳ ಮುಖಂಡರು ಬುಧವಾರ ಚಳ್ಳಕೆರೆ ಗೇಟ್ನಲ್ಲಿ ಸಾರ್ವಜನಿಕ ಜಾಗೃತಿ ಸಭೆ ನಡೆಸಿದರು.